88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ ಜೋಷಿ ಈಮಾಹಿತಿ ಪ್ರಕಟಿಸಿದ್ದಾರೆ.;
ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು ಭಾನುವಾರ ಬಳ್ಳೂರಿನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ ಜೋಷಿ, "ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ" ಎಂದು ತಿಳಿಸಿದರು.
ಅಲ್ಲದೆ, ಸಮ್ಮೇಳನದಲ್ಲಿ ಅನುವಾದಕಿ ದೀಪ ಬಾಸ್ತಿ ಅವರನ್ನು ಗೌರವಿಸಲಾಗುವುದು ಎಂದೂ ಜೋಷಿ ಅವರು ಮಾಹಿತಿ ನೀಡಿದರು. ಜೂನ್ 29ರಂದು ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಅವರ ಹೆಸರನ್ನು ಸರ್ವಾನುಮತದಿಂದ ಅಂತಿಮಗೊಳಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.