ವೋಲ್ವೋ ಬಸ್ ಸರಣಿ ಅಪಘಾತ; ಭಯಾನಕ ವಿಡಿಯೋ ವೈರಲ್‌

ಅಪಘಾತದ 2.20 ನಿಮಿಷಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಎದುರಿನ ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

Update: 2024-08-13 09:51 GMT
ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯ
Click the Play button to listen to article

ಬೆಂಗಳೂರಿನ ಸಂಚಾರ ದಟ್ಟಣೆಯ ನಡುವೆ ಬಿಎಂಟಿಸಿ ವೋಲ್ವೋ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನ ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿರುವ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.

ಈ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯಲ್ಲಿ ನಡೆದಿದ್ದು, ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಸೇರಿದಂತೆ ಆರು ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ದುರ್ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಸೋಮವಾರ ಬೆಳಿಗ್ಗೆ9.47ರಿಂದ 9.50ರ ನಡುವೆ ಈ ಘಟನೆ ನಡೆದಿದ್ದು, ವೋಲ್ವೋ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಎಚ್ಎಸ್ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು.

ಅಪಘಾತದ 2.20 ನಿಮಿಷಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್‌ ಎದುರಿನ ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಚಾಲಕ ಫ್ಲೈಓವರ್‌ನಲ್ಲಿ ಪೀಕ್ ಅವರ್ ಟ್ರಾಫಿಕ್‌ನಲ್ಲಿ ನಿಧಾನವಾಗಿ ಚಾಲನೆ ಮಾಡುತ್ತಿದ್ದರು.

ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಎಂಟಿಸಿ ಪ್ರಕರಣವನ್ನು ಪರಿಶೀಲಿಸುತ್ತಿದ್ದು, ಅಪಘಾತದ ಕಾರಣವನ್ನು ಪರಿಶೀಲಿಸುತ್ತಿದೆ. ಕೆಲವರು ಇದನ್ನು ಬ್ರೇಕ್ ವೈಫಲ್ಯ ಎಂದು ಹೇಳಿದರೆ, ಇನ್ನು ಕೆಲವರು ಇದನ್ನು ಚಾಲಕನ ನಿರ್ಲಕ್ಷ್ಯ ಎಂದಿದ್ದಾರೆ. ಆದರೆ ಈ ಭೀಕರ ಅಪಘಾತಕ್ಕೆ ಕಾರಣವನ್ನು ಬಿಎಂಟಿಸಿ ಇನ್ನೂ ಘೋಷಿಸಿಲ್ಲ. ಈ ಘಟನೆಯಿಂದ ಹತ್ತಾರು ವಾಹನ ಸವಾರರ ಪ್ರಾಣ ಹೋಗುತ್ತಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Tags:    

Similar News