Gold Smuggling | ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಕಾಂಗ್ರೆಸ್, ಬಿಜೆಪಿ ಕಿತ್ತಾಟ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವು ಅಧಿಕಾರಿಗಳ ಸಹಕಾರವಿಲ್ಲದೆ ರನ್ಯಾಗೆ ಚಿನ್ನ ಕಳ್ಳಸಾಗಣೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಕೆಲವರ ಅಭಿಪ್ರಾಯವಾಗಿದೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
https://thefederal.com/category/states/south/karnataka/karnataka-congress-bjp-spar-over-ranya-rao-gold-smuggling-case-176209
ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪದ ಮೇಲೆ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದು, ರಾಜಕಾರಣಿಗಳು ಮತ್ತಿತರರ ಜತೆ ಆಕೆಗಿರುವ ಸಂಪರ್ಕದ ಸಂಬಂಧ ದಿನಕ್ಕೊಂದು ಮಾಹಿತಿಗಳು ಹೊರಬರುತ್ತಿವೆ.
ಈ ಮಾಹಿತಿಗಳು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿವೆ.
ರನ್ಯಾ ಮಲತಂದೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ವಿಮಾನ ನಿಲ್ದಾಣದ ಶಿಷ್ಟಾಚಾರಗಳ ಸೇವೆಗಳನ್ನು ಚಿನ್ನ ಕಳ್ಳಸಾಗಣೆಗಾಗಿ ಬಳಸಿಕೊಂಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ಹಸ್ತಾಂತರಿಸಿತ್ತು. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾತ್ರವನ್ನು ತನಿಖೆ ಮಾಡುತ್ತಿರುವುದರಿಂದ ಆದೇಶವನ್ನು ಹಿಂಪಡೆದುಕೊಂಡಿದೆ.
ಅಧಿಕೃತ ಭಾಗಿತ್ವ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವು ಅಧಿಕಾರಿಗಳ ಸಹಕಾರವಿಲ್ಲದೆ ರನ್ಯಾಗೆ ಚಿನ್ನ ಕಳ್ಳಸಾಗಣೆ ಮಾಡಲು ಸಾಧ್ಯವಿಲ್ಲ ಎನ್ನುವುದು ಕೆಲವರ ಅಭಿಪ್ರಾಯವಾಗಿದೆ. ರಾಮಚಂದ್ರ ರಾವ್ ಪೊಲೀಸ್ ಮಹಾನಿರ್ದೇಶಕರಾಗಿದ್ದು, ಪ್ರಸ್ತುತ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮುಖ್ಯಸ್ಥರಾಗಿದ್ದಾರೆ. ಆದರೆ ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ನಿರಾಕರಿದ್ದಾರೆ. ಆದರೂ ಗೌರವ್ ಗುಪ್ತಾ ಅವರು ಶಿಷ್ಟಾಚಾರ ಸಂಬಂಧಿತ ಸೌಲಭ್ಯಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾಲ್ಗೊಳ್ಳುವಿಕೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ವಿಮಾನ ನಿಲ್ದಾಣದಲ್ಲಿ ವಿಐಪಿ ಸೇವೆ
ಭದ್ರತಾ ತಪಾಸಣೆಗಳನ್ನು ತಪ್ಪಿಸಲು ರನ್ಯಾ ವಿಮಾನ ನಿಲ್ದಾಣದಲ್ಲಿ ವಿಐಪಿ ಸೇವೆಗಳನ್ನು ಬಳಸಿದ್ದಾರೆ ಎಂಬ ವರದಿಗಳ ಬಳಿಕ ರಾಜಕೀಯ ವಿವಾದಗಳು ತೀವ್ರವಾಗಿ ಭುಗಿಲೆದ್ದಿತು. 2014 ರಿಂದ ಮೂರು ಸಿನಿಮಾಗಳಲ್ಲಿ ನಟಿಸಿರುವ ಮತ್ತು ರೂಪದರ್ಶಿ ಎಂದೂ ಹೇಳಲಾಗುವ ರನ್ಯಾ ಅವರಿಂದ ಮಾರ್ಚ್ 3 ರಂದು ವಿಮಾನ ನಿಲ್ದಾಣದಲ್ಲಿ 12.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಯಿತು. ಬಳಿಕ ಆಕೆಯ ಬೆಂಗಳೂರಿನ ನಿವಾಸದ ಮೇಲೆ ನಡೆದ ದಾಳಿಯಲ್ಲಿ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ರೂ. ನಗದು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ರಾಜಕೀಯ ಜಟಾಪಟಿ
ಈ ಪ್ರಕರಣದ ತನಿಖೆಯ ಮೇಲೆ ಪರಿಣಾಮ ಬೀರಲು ರನ್ಯಾ ರಾಜ್ಯದ ಕಾಂಗ್ರೆಸ್ ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ ಎಂದು ರಾಜ್ಯ ಬಿಜೆಪಿಯ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಅವರು ನಟಿ ಮತ್ತು ಅವರ ಕುಟುಂಬದೊಂದಿಗೆ ಇರುವ ಭಾವಚಿತ್ರವೊಂದನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಈ ಭಾವಚಿತ್ರ ರನ್ಯಾ ಮದುವೆ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ.
"ರಾಜ್ಯದಲ್ಲಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣವು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ. ಈ ದಿನಾಂಕದ ಫೋಟೋದಲ್ಲಿ ಪ್ರಸ್ತುತ ಗೃಹ ಸಚಿವ ಪರಮೇಶ್ವರ ಕೂಡ ಇದ್ದಾರೆ" ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ತನ್ನನ್ನು ತಾನು ಸಮರ್ಥಿಸಿಕೊಂಡ ಕಾಂಗ್ರೆಸ್
ಬಿಜೆಪಿಯ ಆರೋಪವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರಸ್ಕರಿಸಿದ್ದಾರೆ. ಈ ಪ್ರಕರಣಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ಯಾವುದೇ ಮಂತ್ರಿಗಳ ಭಾಗಿಯಾಗಿರುವ ಬಗ್ಗೆ ಪುರಾವೆಗಳನ್ನು ಒದಗಿಸುವಂತೆ ವಿರೋಧ ಪಕ್ಷಗಳಿಗೆ ಸವಾಲು ಹಾಕಿದ್ದಾರೆ. ಯಾವುದೇ ಕಾಂಗ್ರೆಸ್ ಸಚಿವರು ಇಂತಹ ಅಪರಾಧ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ದುಬೈಗೆ ಆಗಾಗ್ಗೆ ಪ್ರವಾಸ
ಮಾರ್ಚ್ 10 ರವರೆಗೆ ರನ್ಯಾ ರಾವ್‌ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಬಳಿಕ ಇದನ್ನು ಮಾರ್ಚ್ 18 ರವರೆಗೆ ವಿಸ್ತರಿಸಲಾಯಿತು. ತಾನು ತನ್ನ ವ್ಯಾಪಾರ ಉದ್ದೇಶಗಳಿಗಾಗಿ ದುಬೈಗೆ ಆಗಾಗ್ಗೆ ಪ್ರವಾಸಕ್ಕೆ ತೆರಳುವುದಾಗಿ ನಟಿ ತನಿಖೆ ವೇಳೆ ಹೇಳಿಕೊಂಡಿದ್ದರೂ ಚಿನ್ನ ಕಳ್ಳಸಾಗಣಿಕೆಗಾಗಿ ಆಕೆ ದುಬೈಗೆ ತೆರಳುತ್ತಿದ್ದಳು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಇದಕ್ಕಿಂತ ದೊಡ್ಡ ದಂಧೆ?
ಕಳೆದ ಆರು ತಿಂಗಳಲ್ಲಿ ರನ್ಯಾ 27 ಬಾರಿ ದುಬೈಗೆ ಭೇಟಿ ನೀಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಕಾರಣಕ್ಕೆ ಇಲಾಖೆಗೆ ಅನುಮಾನ ವ್ಯಕ್ತವಾಗಿ ಆಕೆಯ ಮೇಲೆ ಕಣ್ಣಿಟ್ಟಿದ್ದರು. ಮಾರ್ಚ್ 3 ರಂದು ಅವರು ವಿಮಾನ ನಿಲ್ದಾಣದಿಂದ ಹೊರಬರಲು ಸಿದ್ಧಳಾಗುತ್ತಿದ್ದಂತೆಯೇ ಅವರನ್ನು ತಡೆದು ಪರಿಶೀಲನೆ ನಡೆಸಲಾಯಿತು. ರನ್ಯಾ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿರುವ ದೊಡ್ಡ ದಂಧೆಯ ಭಾಗವಾಗಿರಬಹುದು ಎಂದು ಕೆಲವು ತನಿಖಾಧಿಕಾರಿಗಳ ಅಭಿಪ್ರಾಯವಾಗಿದೆ.