Male Mahadeshwara Hills | ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ದಿನಾಂಕ ನಿಗದಿ
ಬೆಟ್ಟದ ದೇಗುಲದಲ್ಲಿ ಎಲ್ಲವೂ ಸರಿಯಿಲ್ಲ ಮತ್ತು ದೇವಾಲಯದ ಅಧಿಕಾರಿಗಳು ಜನರಿಗಿಂತ ಗುತ್ತಿಗೆದಾರರು ಮತ್ತು ಉದ್ಯಮಿಗಳ ಹಿತಾಸಕ್ತಿಯ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ ಎಂದು ಭಕ್ತರಿಂದ ಆರೋಪಗಳು ಕೇಳಿಬರುತ್ತಿರುತ್ತವೆ.;
ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ (ಎಂಎಂ) ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಸಚಿವ ಸಂಪುಟ ಸಭೆ ಫೆ.17 ಕ್ಕೆ ನಡೆಯಲಿದೆ.
ಈ ಕ್ಯಾಬಿನೆಟ್ ಮೀಟಿಂಗ್ ಗಡಿನಾಡ ಜನರಿಗೆ ಭಾರೀ ನಿರೀಕ್ಷೆ ಹುಟ್ಟಿಸಿದ್ದು ಚಾಮರಾಜನಗರದ ಸರ್ವಾಂಗೀಣ ಅಭಿವೃದ್ಧಿಗೆ ಹಲವು ನಿರ್ಧಾರಗಳನ್ನು ಜಿಲ್ಲೆಯ ಜನರು ನಿರೀಕ್ಷಿಸಿದ್ದಾರೆ.
ಅಪಾರ ನೈಸರ್ಗಿಕ ಸಂಪತ್ತು ಹೊಂದಿರುವ ಗಡಿನಾಡು ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪಖ್ಯಾತಿ ಕೂಡ ಇದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಮೇಲೆ 20ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಈ ಮೌಢ್ಯ ತೊಲಗಿಸುವ ಪ್ರಯತ್ನ ಮಾಡಿದ್ದರು. ಈ ಹಣೆಪಟ್ಟಿ ಪಡೆದಿರುವ ಚಾಮರಾಜನಗರದ ಕಳಂಕ ಅಳಿಸಲು ಸಿದ್ದರಾಮಯ್ಯ ಹಾಗೂ ಅವರ ಸರ್ಕಾರ ಮುಂದಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಮಹತ್ವ
ಮಲೆ ಮಹದೇಶ್ವರ ಬೆಟ್ಟ ಹಳೆಯ ಮೈಸೂರು ಪ್ರದೇಶದ ಪ್ರಮುಖ ಯಾತ್ರಾ ಸ್ಥಳವಾಗಿದೆ. ಹುಣ್ಣಿಮೆ, ಅಮಾವಾಸ್ಯೆಯ ದಿನ ಮತ್ತು ಹಬ್ಬಗಳಂತಹ ವಿಶೇಷ ದಿನಗಳಲ್ಲಿ, ಲಕ್ಷಾಂತರ ಜನರು ದೇವಾಲಯಕ್ಕೆ ಭೇಟಿ ನೀಡಿ ನೀಡುತ್ತಾರೆ. ಕೇವಲ ಮೈಸೂರು ಮಾತ್ರವಲ್ಲದೆ, ರಾಮನಗರ, ಬೆಂಗಳೂರು, ಕೋಲಾರ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಂದಲೂ ಮತ್ತು ತಮಿಳುನಾಡಿನಿಂದಲೂ ಜನರು ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಜನವರಿ 22 ರವರೆಗೆ 30 ದಿನಗಳ ಅವಧಿಯಲ್ಲಿ ದೇವಾಲಯದ ಒಟ್ಟು ಕಾಣಿಕೆ ಸಂಗ್ರವು 18 ಗ್ರಾಂ ಚಿನ್ನ ಮತ್ತು 1.2 ಕೆಜಿ ಬೆಳ್ಳಿಯ ಜೊತೆಗೆ 2.29 ಕೋಟಿ ರೂ.ಗಳಷ್ಟಿತ್ತು.