DCET| ದಾಖಲೆ ಪರಿಶೀಲನೆಗೆ ಎರಡು ದಿನ ವಿಸ್ತರಣೆ: ಕೆಇಎ
ವಿದ್ಯಾರ್ಥಿಗಳ ಮನವಿ ಮೇರೆಗೆ ಜೂನ್ 14 ಹಾಗೂ 16 ಎರಡು ದಿನಗಳ ಕಾಲ ವಿಸ್ತರಿಸಲಾಗಿದ್ದು, ನಿಗದಿತ ಕಾಲೇಜುಗಳಿಗೆ ಮೂಲ ದಾಖಲೆಗಳೊಂದಿಗೆ ತೆರಳಿ ಪರಿಶೀಲನೆ ಮಾಡಿಸಿಕೊಳ್ಳಬಹುದು ಎಂದು ಕೆಇಎ ತಿಳಿಸಿದೆ.;
By : The Federal
Update: 2025-06-13 11:53 GMT
ಎಂಜಿನಿಯರಿಂಗ್ ಎರಡನೇ ವರ್ಷದ ಪದವಿ ಪ್ರವೇಶಕ್ಕಾಗಿ ನಡೆಸಲಾಗುತ್ತಿರುವ ಡಿಸಿಇಟಿ ದಾಖಲೆ ಪರಿಶೀಲನೆಗಾಗಿ ಇನ್ನೂ ಎರಡು ದಿನಗಳ ಕಾಲ ಹೆಚ್ಚುವರಿ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಪ್ರಸನ್ನ ತಿಳಿಸಿದ್ದಾರೆ.
ದಾಖಲೆ ಪರಿಶೀಲನೆ ವೇಳೆ ಕೆಲವು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳ ಮನವಿ ಮೇರೆಗೆ ಜೂನ್ 14 ಹಾಗೂ 16 ಎರಡು ದಿನಗಳ ಕಾಲ ವಿಸ್ತರಿಸಲಾಗಿದ್ದು, ನಿಗದಿತ ಕಾಲೇಜುಗಳಿಗೆ ಮೂಲ ದಾಖಲೆಗಳೊಂದಿಗೆ ತೆರಳಿ ಪರಿಶೀಲನೆ ಮಾಡಿಸಿಕೊಳ್ಳಬಹುದು. ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಮ್ಮ ʼಎಕ್ಸ್ʼ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.