ಫ್ಲಕ್ಸ್ ತೆರವಿಗೆ ಸೂಚನೆ | ಯುವ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಡಿಕೆಶಿ ಅಸಮಾಧಾನ

ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ.;

Update: 2025-03-17 07:35 GMT

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪ್ರಯುಕ್ತ ಅರಮನೆ ಮೈದಾನ ಹಾಗೂ ನಗರದೆಲ್ಲೆಡೆ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ. ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 17ರಂದು ಸೋಮವಾರ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಬೆಂಗಳೂರಿನ ಪ್ಯಾಲೇಸ್ ರಸ್ತೆ ಸೇರಿದಂತೆ ಹಲವು ಕಡೆ ಬಿಬಿಎಂಪಿ ಅನುಮತಿ ಪಡೆಯದೆ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಇದರಿಂದ ಕೋಪಗೊಂಡ ಡಿ.ಕೆ. ಶಿವಕುಮಾರ್, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.

Tags:    

Similar News