Gold Smuggling |ನಟಿ ರನ್ಯಾ ರಾವ್ ಮನೆ ಮೇಲೆ ED ದಾಳಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿರುವ ರನ್ಯಾ ರಾವ್ ಫ್ಲ್ಯಾಟ್‌ ಮೇಲೆ ಈ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗಿದೆ.;

Update: 2025-03-13 12:45 GMT

ನಟಿ ರನ್ಯಾ ರಾವ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಮನೆ ಮೇಲೆ ಇ.ಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಸಿಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ತಂಡದಿಂದ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿರುವ ರನ್ಯಾ ರಾವ್ ಫ್ಲ್ಯಾಟ್‌ ಮೇಲೆ ಈ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗಿದೆ. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಎರಡನೇ ಆರೋಪಿ ತರುಣ್ ಕೊಂಡೂರು ರಾಜು ನಿವಾಸದ ಮೇಲೂ ಇಡಿ ‌ದಾಳಿ ನಡೆದಿದೆ. ತರುಣ್ ರಾಜ್ ರನ್ಯಾ ಆಪ್ತ ಸ್ನೇಹಿತನಾಗಿದ್ದರು.

ಈ ದಾಳಿಗೂ ಮುನ್ನ ಇದಕ್ಕೂ  ನಟಿ ರನ್ಯಾ, ಆಕೆಯ ಪತಿ ಜತಿನ್ ಹಾಗೂ ಗೆಳೆಯ ತರುಣ್ ಮನೆಗಳು ಸೇರಿದಂತೆ 9 ಕಡೆಗಳಲ್ಲಿ ಡಿಆರ್‌ಐ ದಾಳಿ ನಡೆಸಿತ್ತು. ರನ್ಯಾ ಪತಿ ಜತಿನ್ ಹುಕ್ಕೇರಿ ನಿವಾಸ, ರನ್ಯಾ ಮತ್ತು ಗೆಳೆಯ ತರುಣ್‌ಗೆ ಸೇರಿದ ಜಾಗ ಹಾಗೂ ಕೋರಮಂಗಲ, ಇಂದಿರಾನಗರ ಸೇರಿದಂತೆ 9 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

Tags:    

Similar News