Karnataka Budget 2025 | ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳ ಸ್ಥಾಪನೆ

ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ.;

Update: 2025-03-07 10:02 GMT

ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೊಷಣೆ ಮಾಡಲಾಗಿದ್ದು, ಪ್ರಮುಖವಾಗಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ಧಾರೆ.

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ.

ಅಲ್ಲದೆ, ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.

ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್​ನ ಗಾತ್ರ 4 ಲಕ್ಷ ಕೋಟಿ ರೂಗಿಂತ ತುಸು ಹೆಚ್ಚಿನದ್ದಾಗಿದೆ. 2024-25ರ ಬಜೆಟ್ 3,71,383 ಕೋಟಿ ರೂ ಗಾತ್ರದ್ದಾಗಿತ್ತು. ಈ ಬಾರಿ ಅದು 4,09,549 ಕೋಟಿ ರೂನಷ್ಟಿದೆ.

ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ 38,166 ಕೋಟಿ ರೂನಷ್ಟು ಹೆಚ್ಚಳವಾಗಿದೆ. ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಮೀಸಲಿರಿಸಲಾಗಿದೆ. 

Tags:    

Similar News