ದೇವನಹಳ್ಳಿ | ಅರಣ್ಯ ಒತ್ತುವರಿ ತೆರವು: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ

ರೈತ ಶಂಕರ್ ಅವರು ವಿಷ ಸೇವಿಸಿರುವ ರೈತರಾಗಿದ್ದು, ಅಸ್ವಸ್ಥರಾದ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.;

Update: 2025-02-26 07:15 GMT

ಆತ್ಮಹತ್ಯೆಗೆ ಯತ್ನಿಸಿದ ರೈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರು ಹೊರ ವಲಯದ ದೇವನಹಳ್ಳಿ ತಾಲೂಕಿನ ವಿಜಯಪುರ ಧರ್ಮಾಪುರ ಗ್ರಾಮದಲ್ಲಿ ಸೋಮವಾರ ಅರಣ್ಯ ಇಲಾಖೆ ಕೈಗೊಂಡ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ರೈತರೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ರೈತ ಶಂಕರ್ ಅವರು ವಿಷ ಸೇವಿಸಿರುವ ರೈತರಾಗಿದ್ದು, ಅಸ್ವಸ್ಥರಾದ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ ಜಾಗ ಒತ್ತುವರಿ ತೆರವಿಗೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಇತ್ತೀಚೆಗೆ ಜಂಟಿ ಸರ್ವೆ ನಡೆಸಿದ್ದವು. ಸರ್ವೆ ವರದಿ ಆಧಾರದಲ್ಲಿ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಾಚರಣೆ ಕುರಿತು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಮೀನಿನಲ್ಲಿ ಇದ್ದ ವಾಸದ ಮನೆ ಕೆಡವಲಾಗಿದೆ. ಫಸಲಿಗೆ ಬಂದ ಲಕ್ಷಾಂತರ ಮೌಲ್ಯದ ದ್ರಾಕ್ಷಿ ಬೆಳೆ ಹಾಳು ಮಾಡಿದ್ದಾರೆ ಎಂದು ರೈತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

'ಇದೇ ಜಾಗಕ್ಕೆ ಕಂದಾಯ ಇಲಾಖೆ ಮಂಜೂರಾತಿ ಪತ್ರ ನೀಡಿದೆ. ಅಧಿಕಾರಿಗಳು ಮಾಹಿತಿ ನೀಡದೆ ಕಾನೂನಾತ್ಮಕ ಪರಿಹಾರಕ್ಕೆ ಅವಕಾಶ ನೀಡದೆ ಶೋಷಣೆ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಬೀದಿಗೆ ಬಿದ್ದಿದ್ದೇವೆ' ಎಂದು ತಿಳಿಸಿದ್ದಾರೆ.

Tags:    

Similar News