ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿ.ಕೆ. ಶಿವಕುಮಾರ್ ಸೂಚನೆ

ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಕ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು.;

Update: 2025-02-17 08:23 GMT
ಡಿ.ಕೆ ಶಿವಕುಮಾರ್‌

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಯಾವುದೇ ಸಮಯದಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣೆಗೆ ಸಿದ್ದತೆಗಳನ್ನು ನಡೆಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.

ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆಂದು ಹೇಳಿದರು. ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಗ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು.

Tags:    

Similar News