ಪ್ರೊ. ದೊಡ್ಡರಂಗೇಗೌಡರ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದ ಭರಿಸಲು ತೀರ್ಮಾನ

ಪ್ರೊ. ದೊಡ್ಡರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದರು.;

Update: 2025-06-24 09:49 GMT

ಪ್ರೊ. ದೊಡ್ಡರಂಗೇಗೌಡ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್​ ಮಾಜಿ ಸದಸ್ಯ ಪ್ರೊ. ದೊಡ್ಡರಂಗೇಗೌಡರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸಲಾಗುವುದು ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವ ಪ್ರೊ. ದೊಡ್ಡರಂಗೇಗೌಡರನ್ನು ಇಂದು ಭೇಟಿ ಮಾಡಿದ ಸಚಿವರು, ಅವರ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ವೈದ್ಯರಿಂದ ಪ್ರೊ. ದೊಡ್ಡರಂಗೇಗೌಡರ ಆರೋಗ್ಯ ಪರಿಸ್ಥಿತಿ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಚಿವರು, ಅವರಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

"ಪ್ರೊ. ದೊಡ್ಡರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡಲಾಗುವುದು" ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು. ಅವರು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ಪದ್ಮಶ್ರೀ, ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿರುವ ಪ್ರೊ. ದೊಡ್ಡರಂಗೇಗೌಡರು 2021ರಲ್ಲಿ ಕಲಬುರಗಿಯಲ್ಲಿ ನಡೆದ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.  

Tags:    

Similar News