Weather Update | ಬಿಸಲ ಧಗೆ ಹೆಚ್ಚಳ: ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯಿರಿ

Heatwave| ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರನ್ನು ಆಗಾಗ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಸಮಯದಲ್ಲೂ ಕುಡಿಯುವ ನೀರು ಜೊತೆಗೆ ಇರಬೇಕು.;

Update: 2025-03-03 05:24 GMT

ಕರ್ನಾಟಕದಲ್ಲಿ ಬಿಸಿಗಾಳಿ ಹೆಚ್ಚಳವಾಗಿದೆ. 

ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಿಂದಲೇ ಬಿಸಿಲಿನ ಪ್ರಭಾವ ಹೆಚ್ಚಾಗಿದ್ದು, ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಹೆಚ್ಚಳ ಹಿನ್ನೆಲೆ ಕೆಲ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ನೀಡಿದೆ.

ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರನ್ನು ಆಗಾಗ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಸಮಯದಲ್ಲೂ ಕುಡಿಯುವ ನೀರು ಜೊತೆಗೆ ಇರಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ORS), ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಜ್ಯೂಸ್‌, ಮಜ್ಜಿಗೆ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬಹುದಾಗಿದೆ.

ಋತುಮಾನದಲ್ಲಿ ಲಭ್ಯವಿರುವ, ಹೆಚ್ಚು ನೀರಿನಂಶ ಹೊಂದಿರುವ ಹಣ್ಣು, ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸು, ಸೌತೆಕಾಯಿ, ಲೆಟ್ಯೂಸ್, ಎಳನೀರು ಹೆಚ್ಚಾಗಿ ಸೇವಿಸಿ. ಹೆಚ್ಚು ಬಿಸಿಲು ಬೀಳದಂತೆ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಹಾಗಾಗಿ ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.

ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್‌, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸುವುದು ಒಳ್ಳೆಯದು, ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂಗಳನ್ನು ಧರಿಸುವಂತೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Tags:    

Similar News