Indo-Pak war |ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅಣಕು ಕಾರ್ಯಾಚರಣೆ
ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ಈಗಾಗಲೇ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಾಯುದಾಳಿ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಲಾಗುತ್ತಿದೆ.;
ಬೆಂಗಳೂರಿನಲ್ಲಿ ನಡೆದ ಅಣಕು ಕಾರ್ಯಾಚರಣೆ
ರಾಜಧಾನಿ ಬೆಂಗಳೂರು ನಂತರ ಈಗ ಮೈಸೂರು, ರಾಯಚೂರು, ಮಂಡ್ಯ ಹಾಗೂ ಕಾರವಾರ ಜಿಲ್ಲೆಯಲ್ಲಿ ಮೇ 9 ರಿಂದ 12ರವರೆಗೆ ಅಣಕು ಕಾರ್ಯಾಚರಣೆ ನಡೆಯಲಿದೆ. ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕರು ಯಾವ ರೀತಿ ರಕ್ಷಣೆ ಪಡೆಯಬೇಕು ಎನ್ನುವ ಅರಿವು ಮೂಡಿಸಲು ಈ ಅಣಕು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.
ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹೆಚ್ಚುತ್ತಿದೆ. ಕೇಂದ್ರ ಗೃಹ ಇಲಾಖೆಯ ಸೂಚನೆ ಮೇರೆಗೆ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಯುತ್ತಿದ್ದು, ವಾಯುದಾಳಿ ಸಂದರ್ಭದಲ್ಲಿಅನುಸರಿಸಬೇಕಾದ ಅಗತ್ಯ ಕ್ರಮಗಳನ್ನು ಜನರಿಗೆ ತಿಳಿಸಿಕೊಡಲಾಗುವುದು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಮೇ9 ರಂದು ರಾಯಚೂರು, ಮೇ10 ರಂದು ಮೈಸೂರು, ಮೇ11 ರಂದು ಮಂಡ್ಯ ಹಾಗೂ ಮೇ12 ರಂದು ಕಾರವಾರದಲ್ಲಿ ನಡೆಯಲಿದೆ.
ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗೃಹರಕ್ಷಕದಳ ಸಿಬ್ಬಂದಿ, ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್ ಹಾಗೂ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡು ನಾಗರಿಕರಿಗೆ ಅಣಕು ಪ್ರದರ್ಶನದ ಮೂಲಕ ಮಾಹಿತಿ ನೀಡಲಿದ್ದಾರೆ. ಬುಧವಾರ (ಮೇ7)ರಂದು ಬೆಂಗಳೂರಿನಲ್ಲಿ ನಡೆದ ಅಣಕು ಕಾರ್ಯಾಚರಣೆ ಯಶಸ್ವಿಯಾಗಿತ್ತು.