RCB UNBOXing : ಅಭಿಮಾನಿಗಳಿಗೆ ಕೊಹ್ಲಿಯ ಹೃದಯಸ್ಪರ್ಶಿ ಸಂದೇಶ
ನೂತನ ನಾಯಕ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ.
ವಿರಾಟ್ ಕೊಹ್ಲಿ ತಂಡದ ನಾಯಕರಾಗಿರುವ ರಜತ್ ಪಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು.
ಪ್ರತಿ ವರ್ಷ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ಅಭಿಮಾನಿಗಳಿಗೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ಈ ಬಾರಿ ಸೋಮವಾರ (ಮಾರ್ಚ್ ೧೭) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 'ಆರ್‌ಸಿಬಿ ಅನ್‌ಬಾಕ್ಸ್' ಕಾರ್ಯಕ್ರಮ ಏರ್ಪಟ್ಟಿತ್ತು.
ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಆರ್ಸಿಬಿಯ ದತ್ತು ಪುತ್ರ ವಿರಾಟ್ ಕೊಹ್ಲಿ ತಂಡದ ನಾಯಕರಾಗಿರುವ ರಜತ್ ಪಾಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು. ನೂತನ ನಾಯಕನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ. ರಜತ್ ಈ ಅದ್ಭುತ ಫ್ರಾಂಚೈಸಿಗಾಗಿ ಉತ್ತಮ ಕೆಲಸ ಮಾಡುತ್ತಾರೆ ಮತ್ತು ಈ ತಂಡವನ್ನು ಮುಂದೆ ಕೊಂಡೊಯ್ಯುತ್ತಾರೆ ಎಂದು ಹೇಳಿದರು.
ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಟಿಕೆಟ್‌ಗಳು ಕೇವಲ ಒಂದು ತಾಸಿನಲ್ಲಿ ಮಾರಾಟವಾಗಿದ್ದು, ಇದು ಅಭಿಮಾನಿಗಳ ಆರ್‌ಸಿಬಿ ಮೇಲಿನ ಪ್ರೀತಿಯನ್ನು ತೋರಿಸುತ್ತದೆ. ಈ ಕಾರ್ಯಕ್ರಮದಲ್ಲಿ ತಂಡದ ಆಟಗಾರರ ಪರಿಚಯ, ಹೊಸ ಜೆರ್ಸಿಯ ಅನಾವರಣ, ಮತ್ತು ಸಂಗೀತ ಕಾರ್ಯಕ್ರಮಗಳು ನಡೆದವು. ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಆಟಗಾರರನ್ನು ಸಮೀಪದಿಂದ ನೋಡುಬ ಮತ್ತು ಅವರೊಂದಿಗೆ ಮಾತನಾಡುವ ಅವಕಾಶ ಕೂಡ ಲಭ್ಯವಾಗಿತ್ತು.
ಆರ್‌ಸಿಬಿ ತಂಡವು ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ. ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್ಸ್ಟೋನ್, ಜೋಶ್ ಹ್ಯಾಝಲ್‌ವುಡ್ ಸೇರಿದಂತೆ ಹಲವು ಪ್ರಮುಖ ಆಟಗಾರರು ಈ ತಂಡದಲ್ಲಿದ್ದಾರೆ. ಆರ್‌ಸಿಬಿ ಅಭಿಮಾನಿಗಳು ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ತಂಡದಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ. ರಜತ್ ಪಟಿದಾರ್ ಅವರ ನಾಯಕತ್ವದಲ್ಲಿ, ತಂಡವು ಐಪಿಎಲ್ ಕಪ್ ಗೆಲ್ಲುವ ಕನಸು ನನಸಾಗುವತ್ತ ಹೆಜ್ಜೆ ಹಾಕುತ್ತಿದೆ.