Tejaswi Surya | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕರ್ನಾಟಕ ಸಂಗೀತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದ್ದಾರೆ.;

Update: 2025-03-06 10:35 GMT

ತೇಜಸ್ವಿ ಸೂರ್ಯ 

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕರ್ನಾಟಕ ಸಂಗೀತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದ್ದಾರೆ. ಕುಟುಂಬ ವರ್ಗ ಮತ್ತು ಕೆಲವು ಗಣ್ಯರ ಸಮ್ಮುಖದಲ್ಲಿ ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. 

ಎರಡು ಬಾರಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರ ಜೀವನದಲ್ಲಿ ಇದು ಹೊಸ ಅಧ್ಯಾಯ. ಅನೇಕ ರಾಜಕಾರಣಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಶುಭಾಶಯ ಕೋರುತ್ತಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ, ಅಮಿತ್ ಮಾಳವೀಯ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

ಶಿವಶ್ರೀ ಸ್ಕಂದಪ್ರಸಾದ್ ಯಾರು?

ಶಿವಶ್ರೀ ಸ್ಕಂದಪ್ರಸಾದ್ ಬಹುಮುಖ ಪ್ರತಿಭೆ. ಅವರು ಕರ್ನಾಟಕ ಸಂಗೀತ, ಭರತನಾಟ್ಯ ಮತ್ತು ಚಿತ್ರಕಲೆಯಲ್ಲಿ ಪ್ರವೀಣರು. ಸಂಗೀತ ಹಿನ್ನೆಲೆಯ ಕುಟುಂಬದಿಂದ ಬಂದ ಶಿವಶ್ರೀ, ಗುರು ಎ.ಎಸ್.ಮುರಳಿ ಅವರ ಬಳಿ ಸಂಗೀತ ಕಳಿತುಕೊಂಡಿದ್ದಾರೆ. ಅವರು ಬ್ರಹ್ಮ ಗಾನ ಸಭಾ ಮತ್ತು ಕಾರ್ತಿಕ್ ಫೈನ್ ಆರ್ಟ್ಸ್‌ನಂತಹ ಪ್ರತಿಷ್ಠಿತ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.

ಶಿವಶ್ರೀ ಅವರು ಡೆನ್ಮಾರ್ಕ್ ಮತ್ತು ದಕ್ಷಿಣ ಕೊರಿಯಾದಲ್ಲಿ ಅಂತರರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳ ಭಾಗವಾಗಿದ್ದಾರೆ. ಶಿಕ್ಷಣದ ಬಗ್ಗೆ ಹೇಳುವುದಾದರೆ, ಅವರು SASTRA ವಿಶ್ವವಿದ್ಯಾಲಯದಿಂದ ಜೈವಿಕ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಇದಲ್ಲದೆ, ಅವರು ಸಂಸ್ಕೃತ ಅಧ್ಯಯನ ಮಾಡಿದ್ದು ಮತ್ತು ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಶಿಕ್ಷಣವನ್ನೂ ಸಹ ಪಡೆದಿದ್ದಾರೆ.

Tags:    

Similar News