ನೇಹಾ ಕೊಲೆ ಪ್ರಕರಣ | ಮಗಳ ಕೊಲೆ ಹಿಂದೆ ಶಾಸಕರ ಕೈವಾಡ: ನೇಹಾ ತಂದೆ ಆರೋಪ
ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ಲದೆ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ.;
ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ನಿರಂಜನ್ ಹಿರೇಮಠ್, ತಮ್ಮ ಮಗಳು ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ. ಈ ತನಿಖೆಯ ಹಾದಿ ಎತ್ತ ಸಾಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ಲದೆ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ. ಆದ್ದರಿಂದ ಸಿಬಿಐ ತನಿಖೆ ಆಗಬೇಕು. ಕೊಲೆ ಕೇಸ್ನಲ್ಲಿ ಶಾಸಕರ ಕೈವಾಡ ಇರುವುದು ಸತ್ಯ ಎಂದು ಗಂಭೀರ ಆರೋಪ ಮಾಡಿದ್ದಾರೆ.
2024ರ ಏಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.