Sukri Bommagowda| ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Sukri Bommagowda| ಬೊಮ್ಮಗೌಡರಿಗೆ ಬಾಲ್ಯದಲ್ಲಿಯೇ ಅವರ ತಾಯಿ ಹಾಡಲು ಕಲಿಸಿದರು. ಮತ್ತು ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಮತ್ತು ಹಾಡುಗಳನ್ನು ಸಂರಕ್ಷಿಸಲು ಶ್ರಮಿಸಿದ್ದಾರೆ.;
ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಬುಧವಾರ (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮಗೌಡ ಜಾನಪದ ಸಂಗೀತಕ್ಕೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾದ ಅವರನ್ನು, ಜಾನಪದ ಗೀತೆಗಳ ಭಾವಪೂರ್ಣ ನಿರೂಪಣೆಯಿಂದಾಗಿ "ಜಾನಪದ ಸಂಗೀತದ ಕೋಗಿಲೆ" ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು.
1988 ಅವರ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಗುರುತಿಸಿತು, ಮತ್ತು ಅಂದಿನಿಂದ ಅವರು ಕಲೆ ಮತ್ತು ಸಂಗೀತಕ್ಕೆ ನೀಡಿದ ಕೊಡುಗೆಗಳಿಗಾಗಿ ನಾಡೋಜ ಪ್ರಶಸ್ತಿ ಮತ್ತು ಜಾನಪದ ಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ರಾಜ್ಯ ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು 2017 ರಲ್ಲಿ ಜಾನಪದ ಗಾಯನಕ್ಕಾಗಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
ಬೊಮ್ಮಗೌಡರಿಗೆ ಬಾಲ್ಯದಲ್ಲಿಯೇ ಅವರ ತಾಯಿ ಹಾಡಲು ಕಲಿಸಿದ್ದರು. ಮತ್ತು ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಮತ್ತು ಹಾಡುಗಳನ್ನು ಸಂರಕ್ಷಿಸಲು ಶ್ರಮಿಸಿದ್ದಾರೆ.