PG Medical Fee | ವೈದ್ಯಕೀಯ ಪಿಜಿ ಪ್ರವೇಶ ಶುಲ್ಕ ಪಾವತಿ ದಿನಾಂಕ ವಿಸ್ತರಣೆ
ಶುಲ್ಕ ಪಾವತಿಸಿದವರು, ಫೆ.8ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.;
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಶುಲ್ಕ ಪಾವತಿಸಿದವರು, ಫೆ.8ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಚ್ಚುವರಿ ಸೀಟುಗಳಿಗೆ ಕೌನ್ಸೆಲಿಂಗ್
ಎಂಪಿಟಿ ಮತ್ತು ಎಂಎಸ್ ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರದಿಂದ ಹೆಚ್ಚುವರಿ ಸೀಟುಗಳು ಮಂಜೂರಾಗಿರುವ ಕಾರಣ ಆ ಸೀಟುಗಳ ಭರ್ತಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಬುಧವಾರದಿಂದ ಆರಂಭಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಫೆ.7ರಂದು ಬೆಳಿಗ್ಗೆ 11ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಸಂಜೆ 5 ಗಂಟೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಫೆ.8ರಿಂದ 10ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಇದುವರೆಗೂ ಸೀಟು ಹಂಚಿಕೆಯಾಗದವರು ಮಾತ್ರ ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದ್ದಾರೆ.
ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಹೋಗುವಾಗ ಮೂಲ ದಾಖಲೆಗಳ ಸಮೇತ ಹೋಗಬೇಕು ಎಂದು ಅವರು ವಿವರಿಸಿದ್ದಾರೆ.