Attack on Bus Conductor | ಬೆಳಗಾವಿಯಲ್ಲಿ ಕರವೇ- ಸಾರಿಗೆ ನೌಕರರ ಪ್ರತಿಭಟನೆ

ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ಕರವೇ ಮತ್ತು ಸಾರಿಗೆ ನೌಕರರು ಪ್ರತ್ಯೇಕ ಪ್ರತಿಭಟನೆ ನಡೆಸಿದರು.;

Update: 2025-02-25 12:06 GMT
ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ

ಕನ್ನಡ ಮಾತನಾಡಿದ್ದಕ್ಕಾಗಿ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಮಂಗಳವಾರ ಬೆಳಗಾವಿಯಲ್ಲಿ ಸರಣಿ ಪ್ರತಿಭಟನೆಗಳು ನಡೆದೆವು.

ಒಂದು ಕಡೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ಬಣ ಅವರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರೆ, ಮತ್ತೊಂದು ಕಡೆ ಕರವೇ ಪ್ರವೀಣ್‌ ಶೆಟ್ಟಿ ಬಣ ಕೂಡ ಪ್ರತಿಭಟನೆ ನಡೆಸಿತು. ಈ ನಡುವೆ ಹಲ್ಲೆಗೊಳಗಾದ ಕಂಡಕ್ಟರ್‌ ಪರವಾಗಿ ಪ್ರತಿಭಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರು, ಸುಳ್ಳು ಪೋಕ್ಸೊ ಪ್ರಕರಣ ದಾಖಲಿಸಿದ ಪಿಎಸ್‌ಐ ಅಮಾನತಿಗೆ ಆಗ್ರಹಿಸಿತು.

ಚನ್ನಮ್ಮ ವೃತ್ತದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಂಇಎಸ್, ಶಿವಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಕಂಡಕ್ಟರ್ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಸಿಪಿಐ ಅಮಾನತು ಮಾಡುವಂತೆ ಆಗ್ರಹಿಸಿದರು. 

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ನಡೆಸಿದರು. ಆದರೆ, ಪೊಲೀಸರು ಅವರನ್ನು ಮಾರ್ಗಮಧ್ಯದಲ್ಲೇ ವಶಕ್ಕೆ ಪಡೆದರು. ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. 

ಸಾರಿಗೆ ಇಲಾಖೆ ನೌಕರ ಪ್ರತಿಭಟನೆ

ಬಸ್ ಕಂಡಕ್ಟರ್ ಮೇಲೆ ಮರಾಠಿ ಭಾಷಿಕ ಯುವಕರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಸಾರಿಗೆ ಇಲಾಖೆಯ ನೌಕರರು ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಿದರು. 

ಸಾರಿಗೆ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೇಂದ್ರ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

Tags:    

Similar News