Rain Alert| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.;

Update: 2025-02-23 12:35 GMT
ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಚಂಡಮಾರುತದ ಪರಿಚಲನೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಮತ್ತು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 19°C ಇರುವ ಸಾಧ್ಯತೆ ಇದೆ.

ಇನ್ನು ಫೆ. 25ರಿಂದ ರಾಜ್ಯದಲ್ಲಿ ಒಣ ಹವೆ ವಾತಾವರಣ ಇರಲಿದ್ದು, ಮಾರ್ಚ್ 1ರವರೆಗೆ ಇದೇ ರೀತಿ ಸ್ಥಿತಿ ಮುಂದುವರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-3 ಡಿ.ಸೆ. ಮತ್ತು ದಕ್ಷಿಣ ಒಳನಾಡಿನಲ್ಲಿ 1-2 ಡಿ.ಸೆ. ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Tags:    

Similar News