BIFFes 2025 | ಡಿಕೆಶಿ ʼನೆಟ್‌ ಬೋಲ್ಟ್‌ʼ ಹೇಳಿಕೆ: ಸಾಹೇಬರು ಹೇಳಿದ್ದರಲ್ಲಿ ತಪ್ಪೇನಿಲ್ಲಾ ಎಂದ ಚಿತ್ರನಟಿ ರಮ್ಯಾ

ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ.;

Update: 2025-03-03 11:57 GMT

ನಟಿ ರಮ್ಯಾ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಲ, ಭಾಷೆ ವಿಚಾರದಲ್ಲಿ ಕಲಾವಿದರಿಗೆ ಎಚ್ಚರಿಕೆ ನೀಡಿದ್ದನ್ನು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಸಮರ್ಥಿಸಿಕೊಂಡಿದ್ದು, ಸಾಹೇಬರು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ  ಚಲನಚಿತ್ರೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಪ್ರಮುಖರು ಭಾಗಿಯಾಗದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿ, ‘ಯಾರಿಗೆ ಹೇಗೆ ನಟ್ಟು ಬೋಲ್ಟ್‌ ಟೈಟ್‌ ಮಾಡಬೇಕು ಎನ್ನುವುದು ಗೊತ್ತಿದೆ’ ಎಂದು  ಹೇಳಿಕೆ ನೀಡಿದ್ದರು.

ಭಾನುವಾರ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ ಮುನ್ನ ಹಂಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯ ಅವರು,  "ಸಾಹೇಬರು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್​ಕುಮಾರ್​ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ನಡುವೆ ಮೊದಲು ಇದ್ದ ಬೆಂಬಲ, ಪ್ರೋತ್ಸಾಹ ಇವತ್ತು ನನಗೆ ಕಾಣಿಸುತ್ತಿಲ್ಲ," ’ ಎಂದು ಹೇಳಿದ್ದಾರೆ. 

Full View

ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ ನಾವು ಯಾವಾಗಲೂ ಬೆಂಬಲ ನೀಡಬೇಕು. ಹಾಗಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದರಲ್ಲಿ ನನಗೆ ಏನೂ ತಪ್ಪು ಎನಿಸಿಲ್ಲ," ಎಂದು ರಮ್ಯಾ ಅವರು ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ನಡೆದ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಯ ಸಂದರ್ಭದಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಕನ್ನಡದ ನೆಲ, ಜಲ, ಭಾಷೆ ವಿಷಯಕ್ಕೆ ಕಲಾವಿದರು ಬೆಂಬಲ ನೀಡುತ್ತಿಲ್ಲ. ಇಂಥವರ ನಟ್ಟು ಬೋಲ್ಟ್ ಟೈಟ್ ಮಾಡುವುದು ಕೂಡ ತಮಗೆ ಗೊತ್ತು ಎಂದು ಅವರು ಹೇಳಿದ್ದರು. 

Tags:    

Similar News