ಶಿವಮೊಗ್ಗ ಮೆಡಿಕಲ್​ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ

ಈ ಹಿಂದೆಯೂ ಸಹ ಪ್ರಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಲೈಂಗಿಕ ಕಿರುಕುಳ ಆರೋಪದ ಮೇಲೆ ಮೂರು ತಿಂಗಳು ಅಮಾನತಾಗಿದ್ದರು. ಇದೀಗ ಮತ್ತೋರ್ವ ಮೆಡಿಕಲ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.;

Update: 2025-06-24 09:47 GMT

ಶಿವಮೊಗ್ಗ ಮೆಡಿಕಲ್‌ ಕಾಲೇಜು

ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ರೀತಿಯ ಆರೋಪದ ಮೇಲೆ ಮೂರು ತಿಂಗಳ ಕಾಲ ಅಮಾನತಾಗಿದ್ದ ಡಾ. ಹೆಬ್ಬಾರ್‌ ವಿರುದ್ಧ ಈಗ ಮತ್ತೊಬ್ಬ ಮೆಡಿಕಲ್ ವಿದ್ಯಾರ್ಥಿನಿ ದೂರು ನೀಡಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪ ಕೇಳಿಬರುತ್ತಿದ್ದಂತೆ ಡಾ. ಅಶ್ವಿನ್ ಹೆಬ್ಬಾರ್ ಕರ್ತವ್ಯಕ್ಕೆ ಗೈರಾಗಿದ್ದಾರೆ. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಉಮಾ ಡಿ ಸದಾಶಿವ, ಕಾಲೇಜಿನ ಆಂತರಿಕ ತನಿಖಾ ವರದಿ ಮತ್ತು ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಎರಡೂ ವರದಿಗಳನ್ನು ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ. 

Tags:    

Similar News