Mysore Muda Case | ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು

ಮುಡಾ ಹಗರಣಕ್ಕೆ ತನಿಖೆಯಲ್ಲಿ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಕ್ರಮ ಕೈಗೊಂಡಿಲ್ಲ. ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ;

Update: 2025-03-12 08:23 GMT

 ಸ್ನೇಹಮಯಿ ಕೃಷ್ಣ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ಪೊಲೀಸರು ಕೈಗೊಂಡಿದ್ದು, ಈಗಾಗಲೇ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳಿದ್ದರೂ ಸುಳ್ಳು ವರದಿ ಸಲ್ಲಿಕೆ ಮಾಡಿದ್ದಾರೆಂದು ಮೂವರು ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.

ಮುಡಾ ಹಗರಣಕ್ಕೆ ತನಿಖೆಯಲ್ಲಿ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಕ್ರಮ ಕೈಗೊಂಡಿಲ್ಲ. ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬಿಕರ್, ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣೇಶ್ವರ ರಾವ್ ಹಾಗೂ ಮೈಸೂರು ಲೋಕಾಯುಕ್ತ ಎಸ್​.ಪಿ ಟಿ.ಜೆ. ಉದೇಶ್ ಅವರ ವಿರುದ್ಧ ಈ ದೂರು ದಾಖಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪ್ರಭಾವಕ್ಕೆ ಒಳಗಾಗಿ, ಸಾಮಾನ್ಯ ತಿಳಿವಳಿಕೆ ಇಲ್ಲದವರಂತೆ ನಡೆದುಕೊಂಡಿರುವ ಬಗ್ಗೆ ವಿಚಾರಣೆ ನಡೆಸಿ, ಇವರಿಗೆ ನಿಜವಾಗಿಯೂ ಸಾಮಾನ್ಯ ಜ್ಞಾನ ಎಂಬುದು ಇಲ್ಲವೆ? ಅಥವಾ ಪ್ರಭಾವಕ್ಕೆ ಒಳಗಾಗಿ ತಮ್ಮ ಭೌದ್ಧಿಕತೆಯನ್ನು ಭ್ರಷ್ಟರಿಗೆ ಅರ್ಪಣೆ ಮಾಡಿರುತ್ತಾರೆಯೆ? ಇಂತಹವರಿಂದ ಭ್ರಷ್ಟಚಾರ, ಅಕ್ರಮ, ಅನ್ಯಾಯಗಳನ್ನು ತಡೆಯಲು ಸಾಧ್ಯವೆ? ಇಂತಹ ಅಧಿಕಾರಿಗಳು ಐ.ಪಿ.ಎಸ್.ಅಧಿಕಾರಿಗಳಾಗಿ ಮುಂದುವರೆಯುವುದು ಸೂಕ್ತವೆ? ಎಂಬುದನ್ನು ಖಚಿತಪಡಿಸಿಕೊಂಡು ಇವರುಗಳ ವಿರುದ್ದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

Tags:    

Similar News