Cabinet Meeting | ಮಾದಪ್ಪನ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಮುಂದೂಡಿಕೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆಗೆ ಸಿದ್ಧತೆ ನಡೆಯುತ್ತಿದ್ದು, ಜರ್ಮನ್ ಟೆಂಟ್ ಹಾಕಲಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್, ರಸ್ತೆಗಳು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.;
ಈ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 17ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.
ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆಗೆ ಸಿದ್ಧತೆ ನಡೆಯುತ್ತಿದ್ದು, ಜರ್ಮನ್ ಟೆಂಟ್ ಹಾಕಲಾಗಿದೆ. ತಾತ್ಕಾಲಿಕ ಹೆಲಿಪ್ಯಾಡ್, ರಸ್ತೆಗಳು ಮುಂತಾದ ಅಗತ್ಯ ಮೂಲಸೌಕರ್ಯವನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಆದರೆ ಇದೀಗ ದಿಢೀರನೆ ಸಂಪುಟ ಸಭೆ ಮುಂದೂಡಿಕೆಯಾಗಿದೆ.
ಇದು ಮೂರನೇ ಬಾರಿಗೆ ಸಭೆ ಮುಂದಾಡಿಕೆಯಾಗಿದ್ದು, ಈ ಹಿಂದೆ ಜನವರಿ ಮೊದಲನೇ ವಾರದ ಬಳಿಕ ಫೆ.14, 15 ಅದಾದ ಬಳಿಕ ಫೆ.17, 18ರಂದು ನಿಗದಿಯಾಗಿತ್ತು. ನಂತರ, ಫೆ.16ರಂದು ಚಾಮರಾಜನಗರದಲ್ಲಿ ಸಮಾವೇಶ, 17ಕ್ಕೆ ಸಂಪುಟ ಸಭೆ ಎಂದು ನಿರ್ಧರಿಸಲಾಗಿತ್ತು. ಈಗ ಈ ದಿನಾಂಕವೂ ಮುಂದೂಡಿಕೆಯಾಗಿದೆ.
ಅದೇ ರೀತಿ, ಫೆಬ್ರವರಿ 16ರಂದು ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮವೂ ಮುಂದಕ್ಕೆ ಹೋಗಿದೆ.