Kyasanur Forest Disease | ಮಂಗನಕಾಯಿಲೆ ಉಲ್ಬಣ: ಚಿಕ್ಕಮಗಳೂರಿನಲ್ಲಿ ಮಹಿಳೆ ಬಲಿ

ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಮಲಾ ಸೋಮವಾರ ಮೃತಪಟ್ಟಿದ್ದಾರೆ.;

Update: 2025-03-17 07:38 GMT

ಮಂಗನಕಾಯಿಲೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. 

ಚಿಕ್ಕಮಗಳೂರಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ.

ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಮಲಾ ಸೋಮವಾರ ಮೃತಪಟ್ಟಿದ್ದಾರೆ.

ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ, ಎನ್​.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ತೆರದಿದೆ.

ಏನಿದು ಮಂಗನಕಾಯಿಲೆ 

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ 1957ರಲ್ಲಿ ಮೊದಲು ಕಾಣಿಸಿಕೊಂಡ ಮಂಗನಕಾಯಿಲೆ ಸಂಶೋಧನೆ ವೇಳೆ ಇದು ಹೊಸ ವೈರಸ್ ಎಂಬುದು ಗೊತ್ತಾದ ಬಳಿಕ Kyasanur Forest Disease (KFD) ಎಂದು ಹೆಸರಿಡಲಾಯಿತು. 

ಈ ಕಾಯಿಲೆ ಹರಡಿದ ಮಂಗಗಳಿಗೆ ಕಚ್ಚಿದ ಉಣುಗು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತಿದೆ. ಮನುಷ್ಯನಿಂದ ಮನುಷ್ಯನಿಗೆ ಹರಡುವ ಕಾಯಿಲೆ ಅಲ್ಲ. ಸಾಧಾರಣವಾಗಿ ಈ ಉಣುಗುಗಳು ಅಕ್ಟೋಬರ್‌ನಲ್ಲಿ ಹುಟ್ಟಿಕೊಂಡು ಡಿಸೆಂಬರ್ ನಂತರ ವೈರಾಣು ಹರಡುತ್ತವೆ. ಬೇಸಿಗೆ ಕಾಲದಲ್ಲೇ ಹೆಚ್ಚಾಗಿ ಹರಡುತ್ತವೆ. ಮಂಗಗಳು ಸಾಯುವುದು ಈ ರೋಗದ ಮುನ್ಸೂಚನೆ..

Tags:    

Similar News