ನ್ಯಾ.ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ

ಬಿಜೆಪಿ ಸೇರ್ಪಡೆ 7ರಂದು;

Update: 2024-03-05 10:03 GMT

ಕೋಲ್ಕತ್ತಾ, ಮಾ.5- ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಮಂಗಳವಾರ (ಮಾರ್ಚ್ 5) ಹುದ್ದೆಗೆ ರಾಜೀನಾಮೆ ನೀಡಿ, ಕೆಲವು ಗಂಟೆಗಳ ನಂತರ ಬಿಜೆಪಿಗೆ ಸೇರುವುದಾಗಿ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದರು. ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ ಪಕ್ಷವಾದ ಬಿಜೆಪಿಯನ್ನು ಸೇರುತ್ತಿದ್ದೇನೆ ಎಂದು ಹೇಳಿದರು.

ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರಿಗೆ ಕಳುಹಿಸಿ ದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎಂಬ ವದಂತಿಯಿದೆ.

Tags:    

Similar News