ಅಗ್ನಿಪಥ ಯೋಜನೆಯಿಂದ ದೇಶದ ಯುವಕರಿಗೆ ತೀವ್ರ ಅನ್ಯಾಯ: ರಾಷ್ಟ್ರಪತಿಗೆ ಖರ್ಗೆ ಪತ್ರ

ಅಗ್ನಿಪಥ್‌ ಯೋಜನೆಯಿಂದಾಗಿ ದೇಶದ ಯುವಕರಿಗೆ "ಘೋರ ಅನ್ಯಾಯ" ಉಂಟಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಪತಿ ದ್ರೌಪದಿಗೆ ಪತ್ರ ಬರೆದಿದ್ದಾರೆ.;

Update: 2024-02-26 13:04 GMT
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Click the Play button to listen to article

ಭಾರತೀಯ ಸೇನೆಯಲ್ಲಿ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ಅಗ್ನಿಪಥ್‌ ಯೋಜನೆಯಿಂದಾಗಿ "ಘೋರ ಅನ್ಯಾಯ" ಉಂಟಾಗಿದೆ. ಅವರಿಗೆ ನ್ಯಾಯವನ್ನು ಒದಗಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಫೆಬ್ರವರಿ 26) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಭಾರತೀಯ ಸೇನೆಯಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುರ್ಮು ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಕೂಡ ಆಗಿದ್ದಾರೆ. ಈ ಯುವಕರು ತಮ್ಮ ಕನಸಿನ ಅನ್ವೇಷಣೆಯಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ. ಹತಾಶೆಯ ಪರಿಣಾಮವಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಖರ್ಗೆ ಪ್ರತಿಪಾದಿಸಿದರು.

ನಮ್ಮ ಯುವಕರು ಈ ರೀತಿಯ ತೊಂದರೆ ಅನುಭವಿಸಲು ಬಿಡಲಾಗುವುದಿಲ್ಲ. ಅವರಿಗೆ ನ್ಯಾಯ ಒದಗಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಜೂನ್ 2022 ರಲ್ಲಿ ಭಾರತೀಯ ಸೇನೆಯಲ್ಲಿ ಸಿಬ್ಬಂದಿಗಳ ಅಲ್ಪಾವಧಿಯ ಸೇರ್ಪಡೆಗಾಗಿ ಸರ್ಕಾರವು ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಜಾರಿಗೆ ತಂದಿತ್ತು. ಇದು ಕನಿಷ್ಠ 17.5 ವರ್ಷ ಮತ್ತು ಗರಿಷ್ಠ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲು ಅವಕಾಶ ನೀಡುತ್ತದೆ. ಅವರಲ್ಲಿ ಶೇಕಡಾ 25 ರಷ್ಟು 15 ವರ್ಷಗಳವರೆಗೆ ಉಳಿಸಿಕೊಳ್ಳಲು ಅವಕಾಶ ನೀಡುತ್ತದೆ.

Tags:    

Similar News