Union Budget 2025 | ಬಜೆಟ್ ಅಧಿವೇಶನ ಆರಂಭ; ನಾಳೆ ಕೇಂದ್ರ ಬಜೆಟ್ ಮಂಡನೆ

ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.;

Update: 2025-01-31 06:25 GMT
Union Budget 2025 | ಬಜೆಟ್ ಅಧಿವೇಶನ ಆರಂಭ; ನಾಳೆ ಕೇಂದ್ರ ಬಜೆಟ್ ಮಂಡನೆ
ನಿರ್ಮಲಾ ಸೀತಾರಾಮನ್

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ (ಜನವರಿ 31) ಆರಂಭವಾಗಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಸಕ್ತ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ಆರ್ಥಿಕ ವರ್ಷದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುವ ಬಜೆಟ್ ಪೂರ್ವ ದಾಖಲೆಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ. ನಾಳೆ ಆರ್ಥಿಕ ಆಯವ್ಯಯ ಮಂಡಿಸಲಿದ್ದಾರೆ.

ಆರ್ಥಿಕ ಸಮೀಕ್ಷೆಯ ಮಂಡನೆಯೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ.

ಅಧಿವೇಶನವು ಏಪ್ರಿಲ್ 4 ರಂದು ಮುಕ್ತಾಯವಾಗಲಿದೆ. ಬಜೆಟ್ ಪ್ರಸ್ತಾಪಗಳನ್ನು ಪರಿಶೀಲಿಸಲು ಫೆಬ್ರವರಿ 13 ರವರೆಗೆ ಬಜೆಟ್ ಅಧಿವೇಶ ನಡೆಯಲಿದೆ. ಮಾರ್ಚ್ 10ರಂದು ಮತ್ತೆ ಅಧಿವೇಶನ ನಡೆಯಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ.  

ಮುಖ್ಯ ಆರ್ಥಿಕ ಸಲಹೆಗಾರ ವಿ.ಅನಂತ ನಾಗೇಶ್ವರನ್ ನೇತೃತ್ವದ ತಂಡವು ಬಜೆಟ್‌ ಸಿದ್ಧಪಡಿಸಿದೆ. ಬಜೆಟ್ ಅಧಿವೇಶನದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಸರ್ಕಾರ ಪಟ್ಟಿ ಮಾಡಿದೆ.

Tags:    

Similar News