ರೈತರ ಪ್ರತಿಭಟನೆ: ಚಂಡೀಗಢಕ್ಕೆ ಗೋಯಲ್, ಮುಂಡಾ

Update: 2024-02-18 16:33 GMT
ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ

ಚಂಡೀಗಢ, ಫೆ .18 :ಪ್ರತಿಭಟನೆ ನಿರತ ರೈತರೊಂದಿಗೆ ಮಾತುಕತೆ ನಡೆಸುತ್ತಿರುವ ಕೇಂದ್ರ ಸಚಿವರ ಸಮಿತಿ ಭಾನುವಾರ ಸಂಜೆ ಚಂಡೀಗಢ ತಲುಪಿದೆ. ರೈತ ಮುಖಂಡರೊಂದಿಗೆ ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಇನ್ನಿತರ ವಿಷಯ ಕುರಿತು ನಾಲ್ಕನೇ ಸುತ್ತಿನ ಸಂವಾದ ನಡೆಸಲಿದೆ. 

ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೋಟೆಲ್‌ಗೆ ಹೋದರು. ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಮತ್ತು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಉಪಸ್ಥಿತರಿದ್ದರು. ಸೆಕ್ಟರ್ 26ರ ಮಹಾತ್ಮ ಗಾಂಧಿ ಸ್ಟೇಟ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸಚಿವರು ಮತ್ತು ರೈತ ಮುಖಂಡರ ನಡುವೆ ಸಭೆ ನಡೆಯಲಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸ್ಥಳಕ್ಕೆ ಆಗಮಿಸಿದ್ದಾರೆ.

ಈ ಹಿಂದೆ ಫೆಬ್ರವರಿ 8, 12 ಮತ್ತು 15 ರಂದು ಎರಡೂ ಕಡೆಯವರು ಭೇಟಿಯಾಗಿ, ಮಾತುಕತೆಗಳು ನಡೆಸಿದ್ದರು. ಆದರೆ, ಯಾವುದೇ ಫಲ ನೀಡಿರಲಿಲ್ಲ. ಆಂದೋಲನದ ನೇತೃತ್ವ ವಹಿಸಿರುವ ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಮತ್ತು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಲು ರೈತರು ಒತ್ತಾಯಿಸುತ್ತಿದ್ದಾರೆ.

Tags:    

Similar News