Karnataka By-Election | ಬಿಜೆಪಿ ಟಿಕೆಟ್ ಘೋಷಣೆ: ಶಿಗ್ಗಾವಿಗೆ ಭರತ್ ಬೊಮ್ಮಾಯಿ, ಸಂಡೂರಿಗೆ ಬಂಗಾರು

Karnataka By-Election| bjp announced tickets for two constituency;

Update: 2024-10-19 15:24 GMT

ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಸಂಡೂರು ಕ್ಷೇತ್ರದಿಂದ ಬಂಗಾರು ಹನುಮಂತುಗೆ ಟಿಕೆಟ್ ಘೋಷಿಸಲಾಗಿದೆ.

ಆದರೆ ಚನ್ನಪಟ್ಟಣಕ್ಕೆ ಅಭ್ಯರ್ಥಿ ಹೆಸರನ್ನು ಇನ್ನೂ ಘೋಷಣೆ ಮಾಡಿಲ್ಲ. ಆ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಎನ್ ಡಿಎ ಮಿತ್ರಪಕ್ಷ ಜೆಡಿಎಸ್ ಗೆ ಬಿಟ್ಟುಕೊಡಬೇಕು ಎಂಬ ಜೆಡಿಎಸ್ ನಾಯಕರ ಬೇಡಿಕೆಗೆ ಬಿಜೆಪಿ ಹೈಕಮಾಂಡ್ ಸಮ್ಮತಿಸಿದಂತಿದೆ.

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರು. ಅವರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ಆದರೆ ಟಿಕೆಟ್ ಯಾರಿಗೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಶನಿವಾರ ಸಂಜೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ವೈಯಕ್ತಿಕ ಕಾರಣಕ್ಕಾಗಿ ತಮ್ಮ ಪುತ್ರನಿಗೆ ಟಿಕೆಟ್ ಬೇಡ ಎಂದು ವರಿಷ್ಠಿರಿಗೆ ಕೋರಿದ್ದಾಗಿ ಹೇಳಿದ್ದರು.

Tags:    

Similar News