ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಬಿಡುವು
ʻವಾಟರ್ ಬೆಲ್ʼ ಯೋಜನೆಯಡಿ ಕೇರಳದ ಎಲ್ಲಾ ಶಾಲೆಗಳಲ್ಲಿ ಬೆಳಗ್ಗೆ 10.30 ಮತ್ತು ಮಧ್ಯಾಹ್ನ 2.30 ಕ್ಕೆ ನೀರು ಕುಡಿಯಲು ಬಿಡುವು ನೀಡಲಾಗುತ್ತದೆ.
By : The Federal
Update: 2024-02-17 06:54 GMT
ತಿರುವನಂತಪುರಂ: ಬೇಸಿಗೆಯಲ್ಲಿ ವಿದ್ಯಾರ್ಥಿಗಳು ಸಾಕಷ್ಟು ನೀರು ಕುಡಿಯಬೇಕು ಎಂಬ ಉದ್ದೇಶದಿಂದ ಕೇರಳ ಸರ್ಕಾರವು ಶಾಲೆಗಳಲ್ಲಿ ʻವಾಟರ್ ಬೆಲ್ʼ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜಿಸಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಬೇಸಿಗೆಯಲ್ಲಿ ದೇಹದಲ್ಲಿ ನೀರಿನಂಶ ಇರಿಸಿಕೊಳ್ಳಲು ವಿದ್ಯಾರ್ಥಿಗಳು ಸಾಕಷ್ಟು ನೀರು ಕುಡಿಯಬೇಕು ಎಂಬ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜಿಸಲಾಗಿದೆ. ಎಲ್ಲ ಶಾಲೆಗಳಲ್ಲಿ ಬೆಳಗ್ಗೆ 10.30 ಮತ್ತು ಮಧ್ಯಾಹ್ನ 2.30 ಕ್ಕೆ ಎರಡು ಬಾರಿ ಬೆಲ್ ಬಾರಿಸುವ ಮೂಲಕ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ತಲಾ ಐದು ನಿಮಿಷ ಕಾಲ ವಿರಾಮ ನೀಡಲಾಗುವುದು.
ಫೆ.20ರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ವಾಟರ್ ಬೆಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದು ಮಕ್ಕಳಲ್ಲಿ ನಿರ್ಜಲೀಕರಣ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.