ಸರ್ಕಾರಕ್ಕೆ ಮುಖಭಂಗ: ಪಂಚಮಸಾಲಿ ಪ್ರತಿಭಟನೆ ವೇಳೆ ಲಾಠಿ ಚಾರ್ಚ್; ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ
ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ. ಕಾಲ ಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಆದೇಶಿಸಿದೆ.;
ಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿಯ ಸುವರ್ಣ ಸೌಧದ ಸಮೀಪ ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರವರ್ಗ ಮತ್ತು ಲಿಂಗಾಯತ ಉಪ-ಪಂಗಡಗಳಿಗೆ ಒಬಿಸಿ ಮೀಸಲಾತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.
ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ. ಕಾಲ ಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಆದೇಶಿಸಿದೆ.
ಪಂಚಮಸಾಲಿ ಲಿಂಗಾಯತ ಸಮುದಾಯವು ತಮ್ಮ ಪ್ರಸ್ತುತ 3ಬಿ ಪ್ರವರ್ಗದ (5% ಮೀಸಲಾತಿ) ಸ್ಥಾನವನ್ನು 2ಎ ಪ್ರವರ್ಗಕ್ಕೆ (15% ಮೀಸಲಾತಿ) ಮೇಲ್ದರ್ಜೆಗೇರಿಸುವಂತೆ ಕಳೆದ ಮೂರು ವರ್ಷಗಳಿಂದ ಆಗ್ರಹಿಸುತ್ತಿದೆ. ಈ ಬೇಡಿಕೆಗಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಾವಿರಾರು ಪ್ರತಿಭಟನಾಕಾರರು ಸುವರ್ಣ ಸೌಧದತ್ತ ಮೆರವಣಿಗೆ ನಡೆಸಿದ್ದರು. ಆದರೆ, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉದ್ವಿಗ್ನಗೊಂಡು ಕಲ್ಲು ತೂರಾಟ ಮತ್ತು ಲಾಠಿ ಚಾರ್ಜ್‌ಗೆ ಕಾರಣವಾಯಿತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರತಿಭಟನಾಕಾರರು ಮತ್ತು 20ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು.
ಹಲವು ನಾಯಕರ ಪೊಲೀಸ್ ವಶಕ್ಕೆ
ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸ್ವಾಮೀಜಿ ಅವರು ಈ ಲಾಠಿ ಚಾರ್ಜ್‌ನಲ್ಲಿ ಪೊಲೀಸರ ಯೋಜಿತ ದಾಳಿ ಎಂದು ಆರೋಪ ಮಾಡಿದ್ದರು.
ಸಮರ್ಥನೆ ಮಾಡಿಕೊಂಡಿದ್ದ ಪರಮೇಶ್ವರ್
ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ಲಾಠಿ ಚಾರ್ಜ್‌ನಲ್ಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಂಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದರು. ಆದರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಕ್ರಮವನ್ನು "ಅಮಾನವೀಯ" ಮತ್ತು "ಸರ್ವಾಧಿಕಾರಿ" ಎಂದು ಟೀಕಿಸಿದ್ದರು