ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾ.14) ತಡ ರಾತ್ರಿ ಮಹಿಳೆಯೊಬ್ಬರು ನೀಡಿದ ದೂಡಿನ ಮೇಲೆ ಪ್ರಕರಣ ದಾಖಲಿಸಿ, ಎಫ್ ಐಆರ್ ಮಾಡಿದ್ದಾರೆ. ವಂಚನೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2 ರಂದು ಅವರನ್ನು ಭೇಟಿ ಮಾಡಿದ್ದಾಗ, ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ ಎಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ.ದೂರಿನ ಹಿನ್ನೆಲೆಯಲ್ಲಿ ಅಪ್ರಾಪ್ತ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಬಿಎಸ್ ಯಡಿಯೂರಪ್ಪ (81) ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354 ಎ ಅಡಿ ಪ್ರಕರಣ ದಾಖಲಿಸಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ.