ELECTORAL BONDS | ಸಂಖ್ಯೆಸಹಿತ ಎಲ್ಲಾ ಬಾಂಡ್ ಬಹಿರಂಗಪಡಿಸಲು ಎಸ್‌ಸಿ ತಾಕೀತು
By : The Federal
Update: 2024-03-18 06:06 GMT
ಸೋಮವಾರ (ಮಾರ್ಚ್ 18)- ಚುನಾವಣೆ ಬಾಂಡ್‌ಗಳ ಪ್ರಕರಣದ ವಿಚಾರಣೆ ವೇಳೆ ಚುನಾವಣೆ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಬೇಕೆಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಹೇಳಿದೆ.
ಎಸ್‌ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಚುನಾವಣೆ ಬಾಂಡ್‌ಗಳ ಆಲ್ಫಾನ್ಯೂಮರಿಕ್ ಸಂಖ್ಯೆಗಳನ್ನು ಒದಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ʻಎಸ್‌ಬಿಐ ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು. ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲ ಎಂದು ಅಫಿಡವಿಟ್ ಸಲ್ಲಿಸಬೇಕುʼ ಮು.ನ್ಯಾ. ಡಿ.ವೈ. ಚಂದ್ರಚೂಡ್ ಹೇಳಿದರು.