ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್‌ ಯಾದವ್

Update: 2024-02-25 11:48 GMT

ಆಗ್ರಾ (ಯುಪಿ), ಫೆ. 25 - ಉತ್ತರ ಪ್ರದೇಶದಲ್ಲಿ ‌ಎಸ್‌ಪಿ ಹಾಗೂ ಕಾಂಗ್ರೆಸ್‌ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಸೇರಿದರು. 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಬ್ಬರು ನಾಯಕರು ನೆರೆದಿದ್ದ ಜನಸಮೂಹದತ್ತ ಕೈಬೀಸಿದಾಗ ಎರಡೂ ಪಕ್ಷಗಳ ಕಾರ್ಯಕರ್ತರು ಘೋಷಣೆ ಕೂಗಿದರು.

ಯಾದವ್ ಮಾತನಾಡಿ, ʻರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ. ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಕಿತ್ತೊಗೆದು ಇಂಡಿಯ ಮೈತ್ರಿ ಕೂಟ ಸಮ್ಮಿಶ್ರ ಸರ್ಕಾರ ನೀಡಲಿದೆ. ರೈತರು, ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಬಿಜೆಪಿ ಗೌರವ ನೀಡಿಲ್ಲʼ ಎಂದು ಹೇಳಿದರು. 

ಆಗ್ರಾದ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪ್ರದೀಪ್ ಮಾಥೂರ್ ಮಾತನಾಡಿ,ʼ ಭಾರತ್ ಜೋಡೋ ನ್ಯಾಯ್ ಯಾತ್ರೆಯಿಂದ ಎರಡೂ ಪಕ್ಷಗಳ ಕಾರ್ಯಕರ್ತರು ಉತ್ಸಾಹಗೊಂಡಿದ್ದಾರೆ. ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತದೆ,ʼ ಎಂದು ತಿಳಿಸಿದರು.

Tags:    

Similar News