ಗೌರವ್ ಗೊಗೊಯ್ ಅವರನ್ನು ಲೋಕಸಭೆಯ ಉಪನಾಯಕನ್ನಾಗಿ ನೇಮಿಸಿದ ಕಾಂಗ್ರೆಸ್‌

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕರನ್ನಾಗಿ ನೇಮಿಸಿದೆ.;

Update: 2024-07-14 12:08 GMT
ಲೋಕಸಭೆಯಲ್ಲಿ ಕಾಂಗ್ರೆಸ್‌ನ ಗೌರವ್ ಗೊಗೊಯ್ ಪಕ್ಷದ ಉಪನಾಯಕರಾಗಲಿದ್ದಾರೆ.
Click the Play button to listen to article

ಸಂಸದ ಗೌರವ್ ಗೊಗೊಯ್ ಅವರನ್ನು ಕಾಂಗ್ರೆಸ್‌ ಲೋಕಸಭೆಯ ಉಪನಾಯಕನ್ನಾಗಿ ನೇಮಿಸಿದೆ. ಈ ಕುರಿತು ಕಾಂಗ್ರೆಸ್‌ ಸ್ವೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದು ನಿರ್ಧಾರ ಸೂಚಿಸಿದೆ. 

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕ ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಗೊಗೊಯ್ ಅವರು ಕೆಳಮನೆಯಲ್ಲಿ ಪಕ್ಷದ ಉಪ ನಾಯಕರಾಗಿದ್ದರೆ, ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರು ಪಕ್ಷದ ಮುಖ್ಯ ಸಚೇತಕರಾಗಿರುತ್ತಾರೆ. ವಿರುದುನಗರ ಸಂಸದ ಮಾಣಿಕ್ಕಂ ಟ್ಯಾಗೋರ್ ಮತ್ತು ಕಿಶನ್‌ಗಂಜ್ ಸಂಸದ ಮೊಹಮ್ಮದ್ ಜಾವೇದ್ ಲೋಕಸಭೆಯಲ್ಲಿ ಪಕ್ಷದ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.  

ಈ ಹಿಂದೆ, ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿತ್ತು, ನಂತರ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಯಿತು. ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಪಕ್ಷಗಳು ಶಕ್ತಿಯುತವಾಗಿ ಜನರ ಸಮಸ್ಯೆಗಳ ಮೇಲೆ ಹೋರಾಟ ನಡೆಸಲಿವೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. 

Tags:    

Similar News