ಕೇಜ್ರಿವಾಲ್ ಅವರಿಗೆ ಇನ್ಸುಲಿನ್ ನೀಡಿಕೆ

Update: 2024-04-23 07:36 GMT

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಿದ್ದರಿಂದ, ಕಡಿಮೆ ಡೋಸ್‌ ಇನ್ಸುಲಿನ್ ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

ʻಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಅವರ ರಕ್ತದಲ್ಲಿನ ಸಕ್ಕರೆಯ ಪ್ರಮಾಣ 217 ಇತ್ತು. ಏಮ್ಸ್ ವೈದ್ಯರ ಸಲಹೆ ಮೇರೆಗೆ ಎರಡು ಘಟಕ ಇನ್ಸುಲಿನ್ ನೀಡಲಾಗಿದೆʼ ಎಂದು ಅಧಿಕಾರಿ ತಿಳಿಸಿದರು. 

ʻಏಪ್ರಿಲ್ 20 ರಂದು ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಏಮ್ಸ್ ತಜ್ಞರು ರಕ್ತದಲ್ಲಿ ಸಕ್ಕರೆ ನಿರ್ದಿಷ್ಟ ಮಟ್ಟ ದಾಟಿದರೆ, ಅವರಿಗೆ ಇನ್ಸುಲಿನ್ ನೀಡಬಹುದು ಎಂದು ಸಲಹೆ ನೀಡಿದ್ದರುʼ ಎಂದು ಹೇಳಿದರು. ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 320 ದಾಟಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಶುಗರ್ ಮಟ್ಟ ಹೆಚ್ಚಾಗುತ್ತಿದ್ದರೂ, ಜೈಲಿನಲ್ಲಿ ಅವರಿಗೆ ಇನ್ಸುಲಿನ್ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿವೆ. 

ತಮ್ಮ ವೈದ್ಯರೊಂದಿಗೆ ವಿಡಿಯೋ ಸಮಾಲೋಚನೆಗೆ ಕೇಜ್ರಿವಾಲ್ ಅವರು ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಆದರೆ, ಸಕ್ಕರೆ ಮಟ್ಟ ನಿಯಂತ್ರಿಸಲು ಇನ್ಸುಲಿನ್ ಅಗತ್ಯವಿದೆಯೇ ಎಂದು ನಿರ್ಧರಿಸಲು ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ನಿರ್ದೇಶಿಸಿದೆ. 

ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ ‌21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಅವರು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿದ್ದಾರೆ.

Tags:    

Similar News