ಮಧ್ಯಪ್ರದೇಶ; ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 9 ಮಕ್ಕಳ ಸಾವು
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಾಹಪುರ್‌ನಲ್ಲಿರುವ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಈ ಘಟನೆ ನಡೆದಿದೆ.
ದೇವಾಲಯದ ಗೋಡೆ ಕುಸಿದು ಒಂಬತ್ತು ಮಕ್ಕಳು ಸಾವನ್ನಪ್ಪಿ, ಅನೇಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಹಪುರದಲ್ಲಿ ನಡೆದಿದೆ.
ರೆಹ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಹಪುರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಡೆ ಕುಸಿದು ಬಿದ್ದ ಘಟನೆಯಲ್ಲಿ 10 ರಿಂದ 15 ವರ್ಷ ವಯಸ್ಸಿನ ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಸಾಗರ ವಿಭಾಗೀಯ ಆಯುಕ್ತ ವೀರೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಶನಿವಾರ ( ಆ.3) ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಗೋಡೆ ಕುಸಿದು ನಾಲ್ಕು ಮಕ್ಕಳು ಸಾವನ್ನಪ್ಪಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.
ಶನಿವಾರದಂದು ಗಢ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಐದರಿಂದ ಏಳು ವರ್ಷದ ಮಕ್ಕಳ ಮೇಲೆ ಶಿಥಿಲಗೊಂಡ ಕಟ್ಟಡದ ಗೋಡೆ ಮಕ್ಕಳ ಮೇಲೆ ಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಡೆ ಕುಸಿದ ಮನೆಯ ಮಾಲೀಕರಾದ ರಮೇಶ್ ನಾಮದೇವ್ ಮತ್ತು ಸತೀಶ್ ನಾಮದೇವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.