ಬ್ಲಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ ಯುವಕ ಮೇಲೆ ಪ್ರಕರಣ ದಾಖಲು

ಯುವತಿಯೋರ್ವಳನ್ನು ಬ್ಲಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ ಯುವಕನೊಬ್ಬನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ನವಿಮುಂಬೈ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Update: 2024-02-19 17:53 GMT
ಯುವಕ ಯುವತಿಯೊಂದಿಗೆ ಸ್ನೇಹ ಬೆಳೆಸಿ ನಿರಂತರ ಅತ್ಯಾಚಾರವೆಸಗಿದ್ದಾನೆ.
Click the Play button to listen to article

ಥಾಣೆ: ಯುವತಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಬ್ಲಾಕ್‌ಮೇಲ್ ಮಾಡಿ ನಿರಂತರ ಅತ್ಯಾಚಾರವೆಸಗಿದ ಪ್ರಕಣಕ್ಕೆ ಸಂಬಂಧಿಸಿಂತೆ ನವಿಮುಂಬೈ ಪೊಲೀಸರು ಯುವನೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿದ ಘಟನೆ ನಡೆದಿದೆ.

25 ವರ್ಷದ ಯವತಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಶನ್‌ ನಲ್ಲಿ ಕೆಲಸ ಮಾಡುತ್ತಿದ್ದು, ಯುವಕ ಅಹ್ಮದ್ನಗರದ ನಿವಾಸಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ದೂರು ನೀಡಿರುವ ಯುವತಿ, ಇವರಿಬ್ಬರು ಸ್ನೇಹಿತರಾಗಿದ್ದು, ಕಳೆದ ಅಕ್ಟೋಬರ್ 2022 ಮತ್ತು ಈ ವರ್ಷದ ಜನವರಿ ನಡುವೆ ಯುವಕ ಮಾನಿಹಾನಿ ಮಾಡುವುದಾಗಿ ಬ್ಲಾಕ್‌ಮೇಲ್‌ ಮಾಡಿ ಯುವತಿ ಮೇಲೆ ಹಲವಾರು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಶನಿವಾರ ಯುವಕನ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದೇವೆ ಆದರೆ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

Tags:    

Similar News