ನವದೆಹಲಿ, ಮೇ 13- ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ದೆಹಲಿ ಮದ್ಯ ಕಾರ್ಯನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧೀಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.
ʻದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಬಯಸಿದಲ್ಲಿ ಈ ಸಂಬಂಧ ಕ್ರಮಕೈಗೊಳ್ಳಬಹುದು. ಆದರೆ, ನಾವು ಈ ವಿಷಯದಲ್ಲಿ ಮಧ್ಯಪ್ರವೇಶಿ ಸುವುದಿಲ್ಲʼ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿದೆ.
ʻಇದು ಔಚಿತ್ಯದ ವಿಷಯ. ಆದರೆ, ಕೇಜ್ರಿವಾಲ್ ಅವರನ್ನು ಬಂಧಿಸಿದ ಮಾತ್ರಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕು ಎನ್ನುವ ಕಾನೂನು ಇಲ್ಲ. ಪ್ರಕರಣದ ವಿಚಾರಣೆ ವೇಳೆ ನಾವು ಇದೇ ಪ್ರಶ್ನೆ ಕೇಳಿದ್ದೇವೆ. ಅಂತಿಮವಾಗಿ, ಇದು ಔಚಿತ್ಯದ ವಿಷಯ. ಈಸಂಬಂಧ ಶಾಸನ ಇಲ್ಲ,ʼ ಎಂದು ಪೀಠ ಅರ್ಜಿದಾರರಿಗೆ ತಿಳಿಸಿದೆ.
ಏಪ್ರಿಲ್ 10 ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಕಾಂತ್ ಭಾಟಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು.