ತೆಲಂಗಾಣ ಸಿಎಂ ಭೇಟಿಯಾದ ರಾಧಿಕಾ ವೇಮುಲ

Update: 2024-05-04 08:05 GMT

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಶನಿವಾರ ಭೇಟಿ ಮಾಡಿದ ರೋಹಿತ್ ವೇಮುಲ ಅವರ ತಾಯಿ ರಾಧಿಕಾ ವೇಮುಲ ಅವರು ಕುಟುಂಬಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯ ಆತ್ಮಹತ್ಯೆ ಕುರಿತು ಮತ್ತೊಮ್ಮೆ ತನಿಖೆ ನಡೆಸಲಾಗುವುದು ಮತ್ತು ನ್ಯಾಯ ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ರೋಹಿತ್ ಅವರ ಆತ್ಮಹತ್ಯೆ ಕುರಿತು ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಮುಕ್ತಾಯ ವರದಿ ಸಲ್ಲಿಸಿದ್ದಾರೆ.ʻ ಅವರು ದಲಿತರಲ್ಲ.ತಮ್ಮ ನೈಜ ಜಾತಿ ಬಗ್ಗೆ ಎಲ್ಲರಿಗೂ ಗೊತ್ತಾಗಲಿದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡರುʼ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ ಡಿಜಿಪಿ ರವಿ ಗುಪ್ತಾ ಅವರು ರೋಹಿತ್ ಅವರ ತಾಯಿ ಮತ್ತು ಇತರರು ವರದಿ ಬಗ್ಗೆ ವ್ಯಕ್ತಪಡಿಸಿದ ಅನುಮಾನಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ಹೆಚ್ಚಿನ ತನಿಖೆ ನಡೆಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ʻಪ್ರಕರಣದ ಮುಂದಿನ ತನಿಖೆಗೆ ಅನುಮತಿ ನೀಡುವಂತೆ ಕೋರಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದುʼ ಎಂದು ಶುಕ್ರವಾರ ರಾತ್ರಿ ಹೇಳಿದ್ದಾರೆ.

ಹರ್ಯಾಣದ ಹಾಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಬಿಜೆಪಿಯ ಮಾಜಿ ಎಂಎಲ್ಸಿ ಎನ್.ರಾಮಚಂದರ್ ರಾವ್  ಮತ್ತಿತರರು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಮುಕ್ತಗೊಂಡಿದ್ದಾರೆ.

Tags:    

Similar News