CAFE BLAST | ಶಂಕಿತ ಮಾಝ್‌ ಮುನೀರ್‌ ಅಹ್ಮದ್‌ ಎನ್‌ ಐ ಎ ವಶಕ್ಕೆ

ದಿ ರಾಮೇಶ್ವರ ಕೆಫೆ ಬಾಂಬ್‌ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಫಿಶ್‌ ಮಾರ್ಕೆಟ್‌ ರಸ್ತೆಯ ಮಾಝ್‌ ನನ್ನು ವಶಕ್ಕೆ ಪಡೆಯಲಾಗಿದೆ.;

Update: 2024-03-16 07:50 GMT
ರಾಮೇಶ್ವರ ಕೆಫೆ
Click the Play button to listen to article

ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್‌ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಫಿಶ್‌ ಮಾರ್ಕೆಟ್‌ ರಸ್ತೆಯ ಮಾಝ್‌ ಎಂಬಾತನನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ ಐಎ ವಶಕ್ಕೆ ಪಡೆದಿದೆ.

ಈತ ಎಂಜಿನಿಯರಿಂಗ್‌ ಪದವೀಧರನಾಗಿದ್ದು, ಭಯೋತ್ಪಾದನಾ ಸಂಘಟನೆಗಳ ಪರ ಮಂಗಳೂರಿನಲ್ಲಿ ಗೋಡೆ ಬರಹ ಬರೆದಿದ್ದ ಪ್ರಕರಣ ಹಾಗೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಬಾಂಬ್‌ಗಳನ್ನು ಪರೀಕ್ಷಾರ್ಥ ಸ್ಫೋಟಿಸಿದ್ದ ಪ್ರಕರಣದಲ್ಲಿ ಈತನನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದವು. ಸದ್ಯ ಈತ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದನು.

ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣದ ಶಂಕಿತ ಮೊಹಮ್ಮದ್‌ ಶಾರೀಕ್‌ ಹಾಗೂ ಅರಾಫತ್‌ ಜೊತೆಯಲ್ಲಿ ಮಾಝ್‌ ಒಡನಾಟ ಹೊಂದಿದ್ದ. ಐಎಸ್‌ ಸಂಘಟನೆಯ ಉಗ್ರರ ಜೊತೆ ಸಂಪರ್ಕವಿಟ್ಟುಕೊಂಡು, ರಾಜ್ಯದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದರ ಭಾಗವಾಗಿಯೇ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟವಾಗಿರುವ ಅನುಮಾನವಿದ್ದು, ಇದೇ ಕಾರಣಕ್ಕೆ ಮಾಝ್‌ನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಹೇಳಿವೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 1ರಂದು ಪೂರ್ವ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ಹತ್ತು ಜನರು ಗಾಯಗೊಂಡಿದ್ದರು. 

ಈ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ(NIA) ವರ್ಗಾಯಿಸಲಾಗಿದೆ. ಬಾಂಬ್ ಸ್ಫೋಟ ಘಟನೆ ಸಂಬಂಧ ಎನ್ ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Tags:    

Similar News