ಪಶ್ಚಿಮ ಬಂಗಾಳ: ಟಿಎಂಸಿ ನಾಯಕನನ್ನು ಗುಂಡಿಕ್ಕಿ ಹತ್ಯ ಮಾಡಿ ಗುಂಪು
ಭೂ ವ್ಯವಹಾರಕ್ಕೆ ಸಂಬಂಧಿಸಿದ ವಾಗ್ವಾದದಲ್ಲಿ ಪುರುಷರ ಗುಂಪೊಂದು ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಕೊಂದಿದೆ.;
ಕೋಲ್ಕತ್ತಾ,: ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಭೂ ವ್ಯವಹಾರಕ್ಕೆ ಸಂಬಂಧಿಸಿದ ನಡೆದ ವಾಗ್ವಾದದಲ್ಲಿ ಗುಂಪೊಂದು ಗುಂಡಿಕ್ಕಿ ಕೊಂದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಆಶೋಕನಗರದ 49 ವರ್ಷದ ಬಿಜನ್ ದಾಸ್ ಎಂಬುವವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅವರು ಪಕ್ಷದ ಸಹೋದ್ಯೋಗಿಯ ಮನೆಗೆ ಹೋದ ಸಂದರ್ಭದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಮಾ 1 ಪಂಚಾಯತ್‌ನ ಉಪ ಮುಖ್ಯಸ್ಥ ದಾಸ್ ಅವರಿಗೆ ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಎರಡು ಬಾರಿ ಗುಂಡು ಹಾರಿಸಿದ್ದು, ಒಂದು ಗುಂಡು ಅವರ ತಲೆಗೆ, ಇನ್ನೊಂದು ಅವರ ಎಡ ಕಿವಿಗೆ ತಗುಲಿದೆ. ಅವರನ್ನು ತಕ್ಷಣವೇ ಬರಾಸತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಸ್ಪತ್ರೆಗೆ ತೆರಳಿದ ಬರಾಸತ್ ಸಂಸದ ಕಾಕಲಿ ಘೋಷ್ ದಸ್ತಿದಾರ್ ಮಾತನಾಡಿದ್ದು, ʼʼಇದೊಂದು ದುರಂತ ಘಟನೆ. ಬಿಜಾನ್ ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ವಿದ್ಯಾರ್ಥಿ ರಾಜಕೀಯದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ಅಂದಿನಿಂದ ಪಕ್ಷದಲ್ಲಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆʼʼ ಎಂದು ಹೇಳಿದ್ದಾರೆ.