ಕಾಲ್ತುಳಿತದಲ್ಲಿ ಬೆಳಗಾವಿ ದಂಪತಿಗೆ ಗಾಯ, ಉಳಿದವರು ಸುರಕ್ಷಿತ


ಬೆಳಗಾವಿ ನಗರದ ಶೆಟ್ಟಿ ಗಲ್ಲಿ ನಿವಾಸಿಗಳಾದ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ದಂಪತಿ ಕಾಲ್ತುಳಿತದ ವೇಳೆ ಪ್ರತ್ಯೇಕವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ. ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೋಷಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಕಾಂಚನಾ-ಅರುಣ್‌ ದಂಪತಿಯ ಪುತ್ರ ಓಂಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನು ಬೆಳಗಾವಿ ಬಿಜೆಪಿ ಕಾರ್ಯಕರ್ತರು ಕೂಡ ಕುಂಭ ಮೇಳಕ್ಕೆ ತೆರಳಿದ್ದುಮ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಬೆಳಗಾವಿ ಬಿಜೆಪಿ ಕಚೇರಿಯ ಉಸ್ತುವಾರಿ ಅಶೋಕ ಬಿಳಿಸೊಕೊಪ್ಪ ದ ಫೆಡರಲ್‌ ಕರ್ನಾಟಕಕ್ಕೆ ತಿಳಿಸಿದರು.

ಬೆಳಗಾವಿಯಿಂದ ಅಂದಾಜು 147 ಜನರು ಮಹಾ ಕುಂಭ ಮೇಳಕ್ಕೆ ತೆರಳಿದ್ದಾರೆ.

Read More
Next Story