ರಾಜಕಾಲುವೆಗೆ 491 ಕಿ.ಮೀ ಉದ್ದದ ತಡೆಗೋಡೆ ನಿರ್ಮಾಣ; ಸಿದ್ದರಾಮಯ್ಯ


ಬೆಂಗಳೂರು ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮೀ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

195 ಕಿ. ಮೀ ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮೀ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ. ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Read More
Next Story