ದುರಂತದ ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಲಿ: ಸಂಸದ ಗೋವಿಂದ ಕಾರಜೋಳ

ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ಕಾರಣ, ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ವಿಜಯೋತ್ಸವದ ಕಾರ್ಯಕ್ರಮ ಆಯೋಜಿಸುವ ಮುನ್ನ ಸರ್ಕಾರ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ ಸರ್ಕಾರ ತರಾತುರಿಯಲ್ಲಿ ನಿರ್ಧಾರ ಮಾಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಈಗ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಜವಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದರು.
Next Story