ಬೆಂಗಳೂರು ನಗರ ರಸ್ತೆಗಳ ಗುಂಡಿ ಮುಚ್ಚಲು ಕ್ರಮ: ಡಿಕೆಶಿ


ಬೆಂಗಳೂರು ನಗರದ ರಸ್ತೆಗುಂಡಿ ಮುಚ್ಚಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೆಲವು ಕಡೆ ವೈಟ್‌ ಟಾಪಿಂಗ್‌ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಗರದಲ್ಲಿ ವೈಟ್‌ ಟಾಪಿಂಗ್‌ ರಸ್ತೆ ನಿರ್ಮಾಣ ಮಾಡುವುದರಿಂದ 30ವರ್ಷ ರಸ್ತೆ ಬಾಳಿಕೆ ಬರುತ್ತವೆ. ಗುಂಡಿಗಳ ಪೋಟೋ ತೆಗೆದು ಕಳಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ಗುಂಡಿ ಮುಚ್ಚಲು ಹಾಗೂ ವೈಟ್‌ ಟಾಪಿಂಗ್‌ ಮಾಡಲು 9,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮಾಹಿತಿ ನೀಡದರು.

 

  

Read More
Next Story