ನಿಷೇಧಾಜ್ಞೆ ನಡುವೆ ಸುಹಾಸ್​ ಮೃತದೇಹದ ಮೆರವಣಿಗೆಗೆ ಸಿದ್ಧತೆ



ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರ ಹೊರತಾಗಿಯೂ ಮೃತದೇಹವನ್ನು ಅವರ ಊರಾದ ಕಾರಿಂಜಕ್ಕೆ ಮೆರವಣಿಗೆಯಲ್ಲಿ ಒಯ್ಯಲು ಹಿಂದುತ್ವವಾದಿ ಸಂಘಟನೆಗಳ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಇದಕ್ಕಾಗಿ ವಾಹನವನ್ನು ಹೂವುಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಗೆ ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ ಹಾಗೂ ರಾಜೇಶ್ ನಾಯ್ಕ್ ಉಳೇಪಾಡಿ, ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದ್ದಾರೆ.

Read More
Next Story