ಟೀಕೆಗಳ ನಡುವೆಯೂ ಚಾಮುಂಡಿ ದೇವಿ ನನ್ನನ್ನು ಕರೆಸಿಕೊಂಡಿದ್ದಾಳೆ; ಬಾನು ಮುಷ್ತಾಕ್

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಉದ್ಘಾಟನೆಯಾಗಿದೆ. ಹಲವು ಏರುಪೇರು, ಚರ್ಚೆ, ಟೀಕೆಗಳ ನಡುವೆಯೂ ತಾಯಿ ಚಾಮುಂಡೇಶ್ವರಿ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ. ದಸರಾ ಉದ್ಘಾಟನೆಯು ನನ್ನ ಜೀವನದ ಅತ್ಯಂತ ಗೌರವದ ಗಳಿಕೆಯಾಗಿದೆ. 

ಮೈಸೂರು ರಾಜಮನೆತನದ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ಈ ದಸರಾ ಉತ್ಸವವು, ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲದೆ, ಕನ್ನಡ ಸಂಸ್ಕೃತಿಯ ಪ್ರತೀಕವೂ ಆಗಿದೆ. ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿ, ಎಲ್ಲರನ್ನು ಒಗ್ಗೂಡಿಸುವ ಹಬ್ಬವಾಗಿ ದಸರಾ ಗುರುತಿಸಿಕೊಂಡಿದೆ ಎಂದು ಬಾನು ಮುಷ್ತಾಕ್‌ ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು. 

Read More
Next Story