ಮೈಸೂರು ದಸರಾ| ಸುಪ್ರೀಂ ಕೋರ್ಟ್ ತೀರ್ಪಿಗೆ ಸ್ವಾಗತಿಸಿದ ಸಿ.ಎಂ ಸಿದ್ದರಾಮಯ್ಯ

ದಸರಾ ಉದ್ಘಾಟನೆ ಕುರಿತ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದನ್ನು ಸ್ವಾಗತಿಸಿದ ಸಿಎಂ, ಸುಪ್ರೀಂ ಕೋರ್ಟ್ "ಸಂವಿಧಾನ ಪೀಠಿಕೆ ಓದಿ" ಎಂದು ಸರಿಯಾದ ಪಾಠ ಮಾಡಿದೆ. ನಮ್ಮ ಸಂವಿಧಾನ ಜಾತ್ಯಾತೀತ ಮತ್ತು ಧರ್ಮಾತೀತವಾಗಿದೆ. ವಿವಿಧ ಜಾತಿ, ಧರ್ಮಗಳಿರುವ ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಬೇಕು. ಯಾವುದೇ ಧರ್ಮಕ್ಕೆ ಸೇರಿದವರಾದರೂ, ನಾವೆಲ್ಲರೂ ಭಾರತೀಯರು ಎಂದು ತಿಳಿಯಬೇಕು ಎಂದು ಅಭಿಪ್ರಾಯಪಟ್ಟರು.

ಸಂವಿಧಾನಕ್ಕೆ ವಿರುದ್ಧವಾಗಿರುವವರು ಮಾತ್ರ ಅದನ್ನು ತಿರುಚಿ ಹೇಳುತ್ತಿದ್ದಾರೆ. ಇದು ಸಂವಿಧಾನ, ನಾಡು ಮತ್ತು ದೇಶಕ್ಕೆ ಮಾಡುವ ಅಪಚಾರ. ಸಹಿಷ್ಣುತೆ ಮತ್ತು ಸಹಬಾಳ್ವೆ ಇರಬೇಕು. ಯಾವುದೇ ಧರ್ಮ ಅಥವಾ ಜಾತಿಗೆ ಅಗ್ರಸ್ಥಾನ ಇಲ್ಲ. ಎಲ್ಲರಿಗೂ ಸಮಾನ ಅವಕಾಶ ಇದೆ ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ಇದನ್ನು ಅರ್ಥಮಾಡಿಕೊಳ್ಳದೆ ಹೋದರೆ ದೇಶಕ್ಕೆ ಅಪಚಾರ ಮಾಡಿದಂತೆ ಎಂದು ಸಿಎಂ ಹೇಳಿದರು.

ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಿರುವುದು ಸರಿಯಾದ ನಿರ್ಧಾರ ಮತ್ತು ನಾಡಿಗೆ ಗೌರವ ತರುವಂತಹ ಕಾರ್ಯವಾಗಿದೆ. ಈ ನಿರ್ಧಾರಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Read More
Next Story